ಬೆಳ್ತಂಗಡಿ ತಾಲೂಕಿನ ತಾಳಿಪಾಡಿ, ಪಲಾರಗೋಳಿ ಮರೋಡಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಪ್ರತಿಷ್ಠಾ ಕಲಶಾಭೀಷೆಕ ಹಾಗೂ ನೇಮೋತ್ಸವದ ಪ್ರಯುಕ್ತ ಧಾರ್ಮಿಕ ಸಭೆ ನಡೆಯಿತು.
ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ಕಟೀಲು ಕ್ಷೇತ್ರದ ಪ್ರಧಾನ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣರು ಅನುಗ್ರಹ ಸಂದೇಶ ನೀಡಿದರು. ಈ ವೇಳೆ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಲು ಶ್ರಮಿಸಿದ, ಹಲವು ಮಂದಿಯನ್ನು ವೇದಿಕೆಯಲ್ಲಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮುಂಬೈ ಉದ್ಯಮಿ ಹರೀಶ್ ಸಾಲ್ಯಾನ್ ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಉದ್ಯಮಿ ಶಶಿಧರ ಶೆಟ್ಟಿ, ಪ್ರಕಾಶ್ ಅಂಚನ್ ಬಂಟ್ವಾಳ, ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಶಶಿಧರ ಪೂಜಾರಿ, ಸೇರಿದಂತೆ
ಮತ್ತಿತರರು ಉಪಸ್ಥಿತರಿದ್ದರು.
Kshetra Samachara
19/02/2021 03:19 pm