ಮಂಗಳೂರು: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ಗುರುವಂದನೆ, ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣೆ ಹಾಗೂ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 72ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿನಂದನೆ ಕಾರ್ಯಕ್ರಮ ಮಂಗಳೂರಿನ ಟಿ.ವಿ. ರಮಣ ಪೈ ಕನ್ವೆನ್ಶನ್ ಹಾಲ್ ನಲ್ಲಿ ನಡೆಯಿತು.
ಎಸ್ ಸಿಡಿಸಿಸಿ ಬ್ಯಾಂಕ್ ನ ಪ್ರಧಾನ ಕಚೇರಿಯಿಂದ ಹೊರಟ ಮೆರವಣಿಗೆಯನ್ನು ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಉದ್ಘಾಟಿಸಿದರು. ಸ್ವಾಮೀಜಿ ಹಾಗೂ ಗಣ್ಯರನ್ನು ಪೂರ್ಣಕುಂಭ ಸ್ವಾಗತದ ಮೂಲಕ ವೇದಿಕೆಗೆ ಕರೆ ತರಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ಪೇಜಾವರ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಗುರುವಂದನೆ ಹಾಗೂ ನಿಧಿ ಸಮರ್ಪಣೆ ಸ್ವೀಕರಿಸಿ ಆಶೀರ್ವಚನ ನೀಡಿದರು.
ಅಧ್ಯಕ್ಷತೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ವಹಿಸಿದ್ದರು. ಸಚಿವ ಮುರುಗೇಶ್ ನಿರಾಣಿ ನವೋದಯ ಪ್ರೇರಕರಿಗೆ ಸಮವಸ್ತ್ರ ವಿತರಿಸಿದರು.
ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಡಾ.ರಾಜೇಂದ್ರ ಕುಮಾರ್ ವೈಯಕ್ತಿಕ ನೆಲೆಯಲ್ಲಿ 5 ಲಕ್ಷ ರೂ. ಹಾಗೂ ನವೋದಯ ಟ್ರಸ್ಟ್ ನಿಂದ 5 ಲಕ್ಷ ರೂ. ದೇಣಿಗೆ ಘೋಷಿಸಿದರು.
Kshetra Samachara
24/02/2021 05:05 pm