ಉಡುಪಿ:ಕರ್ನಾಟಕ ಸರ್ಕಾರ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ ದಾಖಲೆಯ 10,000 ಹೆರಿಗೆಯಾಗಿದ್ದು, ಈ ಸಂಬಂಧ ಇಂದು ಮೊದಲನೇ ಮಗು ಹಾಗೂ 10,000ನೇ ಮಗುವಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಸಮಾರಂಭದಲ್ಲಿ ಮೊದಲನೇ ಮಗು ಕಶ್ವಿ ಮತ್ತು 10,000 ನೇ ಮಗು ಮಹಮ್ಮದ್ ಶಾಜೀಲ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿ.ಆರ್ ಶೆಟ್ಟಿ ಸಂಸ್ಥೆಯ ಸಂಸ್ಥಾಪಕರಾದ ಬಿ. ಆರ್ ಶೆಟ್ಟಿ, ಬಿ. ಆರ್ ಶೆಟ್ಟಿ ಸಂಸ್ಥೆಯ ರಾಷ್ಟ್ರೀಯ ಮುಖ್ಯಸ್ಥರಾದ ಕುಶಲ್ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಮತ್ತು ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Kshetra Samachara
01/03/2021 03:05 pm