ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳದಲ್ಲಿ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ

ಬಂಟ್ವಾಳ: ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕಾ ವಿತರಕರಾದ ನರಸಿಂಹ ಪೈ, ಕೆ.ವಿ.ರಾಜಮ್ಮ ಮತ್ತು ಲೋಕಯ್ಯ ಗೌಡ ಅವರನ್ನು ಸನ್ಮಾನಿಸಲಾಯಿತು.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪ್ರೆಸ್ ಕ್ಲಬ್ ಬಂಟ್ವಾಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿದ ಡಿವೈಎಸ್ಪಿ ವೆಲಂಟೈನ್ ಡಿಸೋಜ, ಪತ್ರಕರ್ತರು ಮತ್ತು ಇಲಾಖೆಯೊಂದಿಗಿನ ನಿಕಟ ಬಾಂಧವ್ಯವನ್ನು ಸ್ಮರಿಸಿದರು. ಬಂಟ್ವಾಳ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಪುಷ್ಪಲತಾ ವಿತರಕರಿಗೆ ಸನ್ಮಾನ ಕಾರ್ಯಕ್ರಮ ಶ್ಲಾಘನಾರ್ಹ ಕಾರ್ಯ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಶುಭ ಹಾರೈಸಿದರು. ವೇದಿಕೆಯಲ್ಲಿ ಪ್ರೆಸ್ ಕ್ಲಬ್ ಬಂಟ್ವಾಳ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಉಪಸ್ಥಿತರಿದ್ದರು.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಅಧ್ಯಕ್ಷ ಹರೀಶ ಮಾಂಬಾಡಿ ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷ ಸಂದೀಪ್ ಸಾಲ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಸದಸ್ಯರಾದ ರತ್ಮದೇವ್ ಪುಂಜಾಲಕಟ್ಟೆ, ಕಿರಣ್ ಸರಪಾಡಿ, ರಮೇಶ್ ಕೆ.ಪುಣಚ ಸನ್ಮಾನಿತರನ್ನು ಪರಿಚಯಿಸಿದರು. ಸದಸ್ಯರಾದ ವಾಮನ ಪೂಜಾರಿ, ಇಮ್ತಿಯಾಜ್ ಶಾ ತುಂಬೆ, ಅಬ್ದುಲ್ ರಹಿಮಾನ್ ತಲಪಾಡಿ, ಯಾದವ್ ಅಗ್ರಬೈಲ್, ಚಂದ್ರಶೇಖರ ಕಲ್ಮಲೆ ಅತಿಥಿಗಳನ್ನು ಗೌರವಿಸಿದರು. ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಲಿ ವಿಟ್ಲ ವಂದಿಸಿದರು, ನಿಕಟಪೂರ್ವಾಧ್ಯಕ್ಷ ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರೂಪಿಸಿದರು.

Edited By : Manjunath H D
Kshetra Samachara

Kshetra Samachara

28/07/2021 05:23 pm

Cinque Terre

4.62 K

Cinque Terre

0

ಸಂಬಂಧಿತ ಸುದ್ದಿ