ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಂದ ಗದ್ದೆಯ ಕಳೆ ಕೀಳುವ ಕಾರ್ಯ

ಉಡುಪಿ: ಹಡಿಲು ಭೂಮಿ ಕೃಷಿ ಆಂದೋಲನಕ್ಕೆ ಈಗ ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು ಧುಮುಕಿದ್ದಾರೆ.ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಕೇರಕಟ್ಟ ಭಾಗದಲ್ಲಿ ಕೃಷಿ ನಾಟಿ ಮಾಡಿದ ಗದ್ದೆಯಲ್ಲಿ ಬೆಳೆದಿರುವ ಕಳೆಗಳನ್ನು ಇಂದು ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿ ತೆಗೆದರು.ಶಾಸಕ ಕೆ. ರಘುಪತಿ ಭಟ್ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದರು.

ವಿದ್ಯಾರ್ಥಿಗಳೊಂದಿಗೆ ಸ್ಕೌಟ್ಸ್ ಮಾಸ್ಟರ್ ಹಾಗೂ ಗೈಡ್ಸ್ ಕ್ಯಾಪ್ಟನ್ ಗಳೂ ಕಳೆ ತೆಗೆಯುವ ಕಾರ್ಯದಲ್ಲಿ ತೊಡಗಿದ್ದು, ಸೇವಾ ಮನೋಭಾವದಿಂದ ಈ ಕಾರ್ಯದಲ್ಲಿ ಪಾಲ್ಗೊಂಡಿರುವ ಎಲ್ಲರಿಗೂ ಶಾಸಕರು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಬಿಜೆಪಿ ಸಹ ವಕ್ತಾರರಾದ ಶಿವಕುಮಾರ್, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ ಹಾಗೂ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತರಾದ ಶಾಂತ ವಿ ಆಚಾರ್ಯ, ಆಯುಕ್ತರಾದ ಡಾll. ವಿಜಯೇಂದ್ರ ವಸಂತ್, ಜ್ಯೋತಿ ಜಿ ಪೈ, ಜಿಲ್ಲಾ ಕಾರ್ಯದರ್ಶಿ ವೇಣುಗೋಪಾಲ್ ಹೆಬ್ಬಾರ್, ಜಿಲ್ಲಾ ಸಂಘಟಕರಾದ ಸುಮನಾ ಶೇಖರ್, ನಿತಿನ್ ಅಮೀನ್ ಹಾಗೂ ಪ್ರಮುಖರು ಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

31/07/2021 03:45 pm

Cinque Terre

9.57 K

Cinque Terre

0

ಸಂಬಂಧಿತ ಸುದ್ದಿ