ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ 60 ಲಕ್ಷ ಅನುದಾನದಲ್ಲಿ ಜಲಜೀವನ್ ಮಿಶನ್ ಯೋಜನೆಗೆ ಶಾಸಕ ಡಾ.ಭರತ್ ಶೆಟ್ಟಿಯವರು ಮಂಗಳವಾರ ಶಂಕು ಸ್ಥಾಪನೆ ನೆರವೇರಿಸಿದರು.
ಅವರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಜಲಜೀವನ್ ಯೋಜನೆ; ಮನೆಮನೆಗೆ ಗಂಗೆ ಬೊಂಡಂತಿಲ ಗ್ರಾಮದಲ್ಲಿ 149.50 ಲಕ್ಷ ಹಾಗೂ ನೀರುಮಾರ್ಗ ಗ್ರಾಮದಲ್ಲಿ 210.99 ಲಕ್ಷ ರೂಪಾಯಿ ಅನುದಾನದಲ್ಲಿ ಅನುಷ್ಠಾನಕ್ಕೆ ಬರಲಿದೆ ಎಂದರು.
ಶಾಸಕರೊಂದಿಗೆ ನೀರುಮಾರ್ಗ ಗ್ರಾ.ಪಂ. ಅಧ್ಯಕ್ಷೆ ಧನವಂತಿ, ಉಪಾಧ್ಯಕ್ಷೆ ಯಶೋಧ, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
Kshetra Samachara
03/08/2021 08:36 pm