ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:"ಬಡವರ, ದುರ್ಬಲ ವರ್ಗದವರಿಗೆ ಸಹಾಯ ಹಸ್ತ ನೀಡುವ ಮುಲ್ಕಿ ಯುವವಾಹಿನಿ ಕಾರ್ಯ ಶ್ಲಾಘನೀಯ"

ಮುಲ್ಕಿ:ಯುವಕರ ಸಂಘಟನೆಯ ಮೂಲಕ ಬಡವರ, ದುರ್ಬಲ ವರ್ಗದವರಿಗೆ ಸಹಾಯ ಹಸ್ತ ನೀಡುವ ಮುಲ್ಕಿ ಯುವವಾಹಿನಿ ಕಾರ್ಯ ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಡಾ.ರಾಜಾರಾಂ ಕೆ.ಬಿ. ಹೇಳಿದರು. ಅವರು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಮುಲ್ಕಿ ಘಟಕದ 2021 22 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷ ದಿವಾಕರ ಕೋಟ್ಯಾನ್ ವಹಿಸಿದ್ದರು.

ನೂತನ ಅಧ್ಯಕ್ಷರಾಗಿ ಭರತೇಶ್ ಅಮೀನ್ ಮಟ್ಟು ಮಾತನಾಡಿ ಘಟಕದ ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಎಲ್ಲರ ಸಹಕಾರ ಅಗತ್ಯ ಎಂದು ವಿನಂತಿಸಿದರು.

ಮುಖ್ಯ ಅತಿಥಿಗಳಾಗಿ ನಮ್ಮ ಕುಡ್ಲ ತುಳು ವಾಹಿನಿ ಮಂಗಳೂರು ನಿರ್ದೇಶಕ ಹರೀಶ್ ಕರ್ಕೇರ ಮಟ್ಟು, ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ರಮೇಶ್ ಅಮೀನ್ ಕೊಕ್ಕರ್‌ಕಲ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಶಕ್ತಿನಗರ,ಮಾಜೀ ಅಧ್ಯಕ ಮೊಹನ್ ಸುವರ್ಣ, ಕಾರ್ಯದರ್ಶಿ ವಿನಯ್ ಕುಮಾರ್ ಮಟ್ಟು, ಸತೀಶ್ ಕಿಲ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಆರ್ಥಿಕವಾಗಿ ಹಿಂದುಳಿದ 5 ಕುಟುಂಬಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು

Edited By : PublicNext Desk
Kshetra Samachara

Kshetra Samachara

06/08/2021 08:48 pm

Cinque Terre

4.52 K

Cinque Terre

0

ಸಂಬಂಧಿತ ಸುದ್ದಿ