ಉಡುಪಿ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಮತ್ತು ದಿ|ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಸಮಿತಿಯ ವತಿಯಿಂದ ನೀಡಲಾಗುವ 2021 ರ ಸಾಲಿನ ರಾಜ್ಯ ಮಟ್ಟದ ಪುರಸ್ಕಾರಕ್ಕೆ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ| ಚೇತನ್ ಲೋಬೊ ಅವರ ʼಚೇತನ ಚಿಂತನʼ ಕೃತಿ ಆಯ್ಕೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನವರಾಗಿದ್ದು, ಸಂವಹನ ಹಾಗೂ ಮಾಧ್ಯಮಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿದ್ದಾರೆ. ಅವರು ಕಪುಚಿನ್ ಸಭೆಗೆ ಸೇರಿದ ಧರ್ಮಗುರುಗಳಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸೇವೆ ನೀಡಿದ ಅನುಭವ ಇವರಿಗಿದ್ದು, ಶಿವಮೊಗ್ಗ ಧರ್ಮಕ್ಷೇತ್ರದ ಕುಟುಂಬ ವಿಕಾಸ ಕೇಂದ್ರದ ನಿರ್ದೇಶಕರಾಗಿ, ಕಪುಚಿನ್ ಶಿಕ್ಷಣ ಮಂಡಳಿ ಬೆಂಗಳೂರು ಇದರ ಕಾರ್ಯದರ್ಶಿಗಳಾಗಿ, ಉಡುಪಿ ಧರ್ಮಪ್ರಾಂತ್ಯದ ಕುಟುಂಬ ವಿಕಾಸ ಕೇಂದ್ರದ ನಿರ್ದೇಶಕರಾಗಿ, ಉಡುಪಿ ಧರ್ಮಪ್ರಾಂತ್ಯದ ಕೊಂಕಣಿ ಪಾಕ್ಷಿಕ ʼಉಜ್ವಾಡ್ʼ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿ ಹಾಗೂ ಇನ್ನೂ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿರುತ್ತಾರೆ.
ಪುರಸ್ಕಾರ ರೂ 25000 ನಗದು ಹಾಗೂ ನೆನಪಿನ ಕಾಣಿಕೆ ಒಳಗೊಂಡಿದ್ದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವಾರ್ಷಿಕ ಮಹಾಸಭೆಯಲ್ಲಿ ಪ್ರದಾನ ಮಾಡಲಾಗುವುದು ಎಂದು ದಿ|ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರ ಸಮಿತಿ ಸಂಚಾಲಕಿ ಆಲಿಸ್ ರೊಡ್ರಿಗಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
11/08/2021 06:38 pm