ಮಂಗಳೂರು: ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ದ.ಕ.ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಸ್ವಾತಂತ್ರ್ಯೋತ್ಸವದ ಸಂದೇಶ ಸಾರಿದ ಸಚಿವ ಎಸ್.ಅಂಗಾರ ದೇಶಕ್ಕೆ ಸ್ವಾತಂತ್ರ್ಯ ದೊರೆತು ಇಂದಿಗೆ 75 ವರ್ಷ ಸಂಪೂರ್ಣ ಗೊಂಡಿದ್ದು, ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಪ್ರಧಾನಿ ಮೋದಿಯವರ ಅಪೇಕ್ಷೇಯಂತೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆ ಮಾಡುತ್ತಿದ್ದೇವೆ. ಕೋವಿಡ್ ಸೋಂಕಿನ ಸಂಕಷ್ಟಕಾಲದಲ್ಲಿಯೂ ಪ್ರಧಾನಿ ನರೇಂದ್ರ ಮೋದಿಜಿಯವರ ಮಾರ್ಗದರ್ಶನದೊಂದಿಗೆ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ರಾಜ್ಯ ಸರಕಾರ ಅನೇಕ ಅಭಿವೃದ್ಧಿ ಕಾರ್ಯದ ಜೊತೆ ಆರ್ಥಿಕ-ಸಾಮಾಜಿಕ ಚಟುವಟಿಕೆಗೆ ಚೈತನ್ಯ ತುಂಬುವಲ್ಲಿ ಯಶಸ್ವಿಯಾಗಿದೆ ಎಂದರು.
ಈ ಸಂದರ್ಭ ಡಿಸಿ ಡಾ.ಕೆ.ವಿ.ರಾಜೇಂದ್ರ, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್, ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ. ಖಾದರ್, ಡಿಸಿಪಿ ಹರಿರಾಂ ಶಂಕರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಮತ್ತಿತರರು ಉಪಸ್ಥಿತರಿದ್ದರು.
Kshetra Samachara
15/08/2021 11:33 am