ಕಡಬ: ಕಡಬ ತಾಲೂಕು ಮಟ್ಟದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಕಡಬ ತಾಲೂಕು ಕಛೇರಿ ಆವರಣದಲ್ಲಿ
ನಡೆಯಿತು.
ಕಡಬ ತಹಶಿಲ್ದಾರ್ ಅನಂತ ಶಂಕರ್ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿ ನಮಗೆ ಸ್ವಾತಂತ್ರ್ಯ ದೊರೆತಿರುವುದು ನಮ್ಮ ಹಿರಿಯರ ತ್ಯಾಗ ಬಲಿದಾನದಿಂದ ಇದು ಅರ್ಥ ಪೂರ್ಣವಾಗಬೇಕಾದರೆ ನಾವು ಸಮಾಜಮುಖಿ ಕಾರ್ಯಗಳೊಂದಿಗೆ ಬ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಬೇಕು ಆ ನಿಟ್ಟಿನಲ್ಲಿ ಸಂಕಲ್ಪ ಮಾಡಬೇಕು ಎಂದು ಹೇಳಿದರು.
ಬಳಿಕ ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪುತ್ತೂರು ಎ.ಪಿ.ಎಂಸಿ ಅಧ್ಯಕ್ಷ ದಿನೇಶ್ ಮೆದು
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ವಾಂತ್ರ್ಯ ಸಂಗ್ರಾಮಸಂದರ್ಭದಲ್ಲಿ ದೇಶದಲ್ಲಿ ಅನಕ್ಷರತೆ ಹೆಚ್ಚಾಗಿದ್ದರೂ
ದೇಶದ ಸಂಸ್ಕೃತಿ ಸಂಸ್ಕಾರದ ಬಗ್ಗೆ ಅಭಿಮಾನ ಗೌರವಿತ್ತು ಇಂದು ಪ್ರತಿಯೊಬ್ಬರಿಗೂ ಶಿಕ್ಷಣವಿದ್ದರೂ ಜನ
ಸಂಸ್ಕಾರವಂಚಿತರಾಗಿದ್ದಾರೆ, ಗತವೈಭವದ ಸಂಸ್ಕೃತಿಯ ಪುನುರುತ್ಥಾನದೊಂದಿಗೆ ದೇಶದ ಅಭಿವೃದ್ಧಿಗೆ
ಪಣತೊಡಬೇಕು ಎಂದರು.
ಈ ಸಂದರ್ಭದಲ್ಲಿ ಕಡಬ ತಾಲೂಕಿನ ಪೊಲೀಸ್, ಆರೋಗ್ಯ, ಕಂದಾಯ, ಪಂಚಾಯತ್, ಅಧಿಕಾರಿಗಳು, ಜನಪ್ರತಿನಿಧಿಗಳು,ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.
Kshetra Samachara
15/08/2021 02:20 pm