ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: "ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿಕೊಟ್ಟರೆ ನಮಗೆ ಸ್ವಾತಂತ್ರ್ಯ ಸಿಕ್ಕಿದಂತೆ": ಉಮಾನಾಥ್ ಕೋಟ್ಯಾನ್

ಮುಲ್ಕಿ:ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ 75 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ನೆರವೇರಿಸಿ ಮಾತನಾಡಿ ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿಕೊಟ್ಟರೆ ನಮಗೆ ಸ್ವಾತಂತ್ರ್ಯ ಸಿಕ್ಕಿದಂತೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ನಾಯಕರನ್ನು ಸ್ಮರಿಸುತ್ತಾ ಸಹಾಯ ಹಸ್ತದ ಮೂಲಕ ಅಭಿವೃದ್ಧಿ ಪಥದತ್ತ ಸಾಗೋಣ ಎಂದರು

ಮೆನ್ನಬೆಟ್ಟು,ಐಕಳ, ಕಿನ್ನಿಗೋಳಿ, ಕಟೀಲು,ಐಕಳ ವ್ಯಾಪ್ತಿಯ ಸುಮಾರು 30 ಮಂದಿಗೆ ಹಕ್ಕು ಪತ್ರ ವಿತರಿಸಲಾಯಿತು.

ಕಿನ್ನಿಗೋಳಿ ಪಟ್ಟಣ ಪಂಚಾಯತ್ ನ ಸುಮಾರು 17 ಮಂದಿ ಪೌರ ಕಾರ್ಮಿಕರನ್ನು ಗೌರವಿಸಲಾಯಿತು.

2020 ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾದಸ್ವರ ವಾದಕರು ಲಿಂಗಪ್ಪ ಶೇರಿಗಾರ್ ಕಟೀಲು ರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಲ್ಕಿ ತಹಶಿಲ್ದಾರ್ ಕಮಲಮ್ಮ, ಮುಖ್ಯಾಧಿಕಾರಿ ಸಾಯೀಶ್ ಚೌಟ, ಭುವನಾಭಿರಾಮ ಉಡುಪ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

15/08/2021 04:17 pm

Cinque Terre

12.04 K

Cinque Terre

0

ಸಂಬಂಧಿತ ಸುದ್ದಿ