ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ:"ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರ ಆದರ್ಶವನ್ನು ಗೌರವಿಸಿ ಸಾಮರಸ್ಯದಿಂದ ಬಾಳ್ವೆ ನಡೆಸೋಣ"

ಮುಲ್ಕಿ:ಹಳೆಯಂಗಡಿ ಭಾರತದ ಕ್ರೈಸ್ತ ಚರ್ಚುಗಳ ಒಕ್ಕೂಟ ಹಾಗೂ ವಿಜಯ ಮಾಸ್ಟರ್ ಟ್ರಸ್ಟ್ ವತಿಯಿಂದ 75ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಮುಕ್ಕ ಶ್ರೀನಿವಾಸ್ ವೈದ್ಯಕೀಯ ಮಹಾವಿದ್ಯಾಲಯ ಜಾರ್ಜ್ ರವರು ದೀಪ ಬೆಳಗಿಸಿ ಉದ್ಘಾಟಿಸಿ “ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರ ಆದರ್ಶವನ್ನು ಗೌರವಿಸಿ ಸಾಮರಸ್ಯದಿಂದ ಬಾಳ್ವೆ ನಡೆಸುವ” ಎಂದರು.

ಸಭೆಯ ಆಧ್ಯಕ್ಷತೆಯನ್ನು ಅಧ್ಯಕ್ಷರು ಭಾರತದ ಕ್ರೈಸ್ತ ಚರ್ಚುಗಳ ಒಕ್ಕೂಟದ ಅಧ್ಯಕ್ಷರಾದ ಡೇನಿಯಲ್ ದೇವರಾಜ್ ವಹಿಸಿದ್ದರು. ಮುಖ್ಯಅತಿಥಿಗಳಾಗಿ ನ್ಯಾನ್ಸಿ ಕರ್ಕಡ, ಶ್ವಾನ್ ಕರ್ಕಡ, ಸಿ.ಎಸ್.ಐ ಶಾಲಾ ಶಿಕ್ಷಕಿ ಪ್ರಸನ್ನಿ, ನ್ಯಾಯಾಂಗ ಇಲಾಖೆ ಅಕ್ಬರ್ ಉಪಸ್ಥಿತರಿದ್ದರು. ಡಿಕ್ಸನ್ ಕಾರ್ಯಕ್ರಮ ನಿರೂಪಿಸಿದರು,ಮೇರಿ ಸ್ವಪ್ನ ಸ್ವಾಗತಿಸಿದರು, ಶ್ರೀಮತಿ ಶಾಂತಿ ವಂದಿಸಿದರು.

Edited By : PublicNext Desk
Kshetra Samachara

Kshetra Samachara

16/08/2021 06:56 pm

Cinque Terre

6 K

Cinque Terre

0

ಸಂಬಂಧಿತ ಸುದ್ದಿ