ಉಡುಪಿ: ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಪ್ರಯುಕ್ತ ದೇವರ ವಿಶೇಷ ಪೂಜೆಗಾಗಿ ಲಡ್ಡಿಗೆಯನ್ನು ತಯಾರಿಸಲು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಚಾಲನೆ ನೀಡಿದರು.ಈ ವರ್ಷ ಸಾವಿರಾರು ಲಡ್ಡು,ಉಂಡೆ,ಚಕ್ಕುಲಿ ಪ್ರಸಾದ ತಯಾರಿಸಲಾಗುತ್ತಿದ್ದು ಇಂದು ಭಕ್ತರಿಗೆ ಹಂಚಲಾಗುತ್ತದೆ.
Kshetra Samachara
30/08/2021 03:17 pm