ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು : ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಗೆ ಗೌರವಾರ್ಪಣೆ

ಮುಲ್ಕಿ:ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು,ಜಿಲ್ಲಾಡಳಿತ, ದ. ಕ. ಜಿಲ್ಲಾ ಪಂಚಾಯತ್,ಗ್ರಾಮ ಪಂಚಾಯತ್ ಪಡುಪಣಂಬೂರು,

ತಾಲೂಕು ಮತ್ತು ಜಿಲ್ಲಾ ಯುವ ಜನ ಒಕ್ಕೂಟ, ದ. ಕ ಜಿಲ್ಲೆ,ಮಾರ್ಗದರ್ಶನದಲ್ಲಿ ಹಳೆಯಂಗಡಿ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ), ಆಶ್ರಯದಲ್ಲಿ ಕ್ರೀಡಾ ಇತಿಹಾಸದಲ್ಲಿ ಅವಿಸ್ಮರಣೀಯರಾದ ಮೇಜರ್ ಧ್ಯಾನ್ ಚಂದ್ ಸ್ಮರಣಾರ್ಥ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನುತೋಕೂರು ಹಿಂದುಸ್ಥಾನಿ ಶಾಲೆಯ ಮೈದಾನದಲ್ಲಿ ಆಚರಿಸಲಾಯಿತು.

ತೋಕೂರು ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಶೇಖರ್ ಶೆಟ್ಟಿಗಾರ್ ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ "ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮ ಜೀವನದ ಅಭಿವೃದ್ಧಿಯ ಮೂಲವಾಗಿರುವ ಕ್ರೀಡೆಯು ನಮ್ಮನ್ನು ಆರೋಗ್ಯಕರವಾಗಿರಿಸುತ್ತದೆ. ಕ್ರೀಡೆಯಿಂದ ದೇಹವು ಉತ್ತಮ ವ್ಯಾಯಾಮವನ್ನು ಪಡೆಯುತ್ತದೆ. ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಛಲಬಿಡದೆ ಸಾಧನೆ ಮಾಡಿ ಯಶಸ್ವಿ ಜೀವನವನ್ನು ರೂಪಿಸಿಕೊಳ್ಳುವ ಶಕ್ತಿ ಇರುತ್ತದೆ" ಎಂದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿ'ಸೋಜ, ಮಾತನಾಡಿದರು . ಬಂಟ್ವಾಳ ತಾಲೂಕಿನ ಅರಣ್ಯ ಸಿಬ್ಬಂದಿ ಜಿತೇಶ್.ಪಿ, ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್, ಸ್ಪೋರ್ಟ್ಸ್ ಕ್ಲಬ್ ನ ಗೌರವ ಅದ್ಯಕ್ಷರಾದ ಮೋಹನ್ ದಾಸ್, ಅಧ್ಯಕ್ಷರಾದ ಸಂತೋಷ್ ದೇವಾಡಿಗ, ಮಹಿಳಾ ಕಾರ್ಯಧ್ಯಕ್ಷೆ ಶೋಭಾ. ವಿ.ಅಂಚನ್ ಈ ಸಂದರ್ಭದಲ್ಲಿ ಸ್ಪೋರ್ಟ್ಸ್ ಕ್ಲಬ್ ನ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಆರು ತಂಡಗಳನ್ನು ಒಳಗೊಂಡ ತೋಕೂರು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ನಡೆಸಲಾಯಿತು. ಅಂತಿಮ ಪಂದ್ಯಾಟದಲ್ಲಿ, ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು, ಹಳೆಯಂಗಡಿ ಪ್ರಥಮ ಹಾಗೂ ಕಂಬಳಬೆಟ್ಟು ಫ್ರೆಂಡ್ಸ್ ಕ್ರಿಕೆಟರ್ಸ್ ದ್ವಿತೀಯ ಸ್ಥಾನ ಪಡೆದು ವಿಜೇತರಾದರು.

ಟೂರ್ನಿಯ ಸರಣಿ ಶ್ರೇಷ್ಠ ಪ್ರಶಸ್ತಿ ಹಾಗೂ ಫೈನಲ್ ಪಂದ್ಯದ ಪಂದ್ಯಶ್ರೇಷ್ಠ ಪ್ರಶಸ್ತಿ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನ ವಿಶಾಲ್, ಕಂಬಳ ಬೆಟ್ಟು ಫ್ರೆಂಡ್ಸ್ ಕ್ರಿಕೆಟರ್ಸ್ ನ ತಿಲಕ್, ಉತ್ತಮ ದಾಂಡಿಗ ಪ್ರಶಸ್ತಿ ಹಾಗೂ ಧೀರಜ್ ಉತ್ತಮ ಬೌಲರ್ ಪ್ರಶಸ್ತಿ ಪಡೆದುಕೊಂಡರು.

ಗೌರವ ಮಾರ್ಗದರ್ಶಕರಾದ ಲಕ್ಷ್ಮಣ್ ಕೆರೆಕಾಡು, ಸದಸ್ಯರಾದ ತಾರಾನಾಥ ಅಮೀನ್, ಜಗದೀಶ್ ಕೋಟ್ಯಾನ್ ,ಹಿಮಕರ್ ಸುವರ್ಣ,ವಿಜೇತರಿಗೆ ಬಹುಮಾನವನ್ನು ವಿತರಿಸಿದರು. ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಸಂತೋಷ್ ದೇವಾಡಿಗ ಸ್ವಾಗತಿಸಿ, ಸಾಂಸ್ಕೃತಿಕ ಕಾರ್ಯದರ್ಶಿ, ಪ್ರಶಾಂತ್ ಕುಮಾರ್ ಬೇಕಲ್ ವಂದಿಸಿದರು. ಕಾರ್ಯಾಧ್ಯಕ್ಷರು, ಸುರೇಶ್ ಶೆಟ್ಟಿ ಕಾರ್ಯಕ್ರಮದ ನಿರೂಪಣೆ ಮಾಡಿದರು.*

Edited By : PublicNext Desk
Kshetra Samachara

Kshetra Samachara

02/09/2021 02:26 pm

Cinque Terre

2.35 K

Cinque Terre

0

ಸಂಬಂಧಿತ ಸುದ್ದಿ