ಮುಲ್ಕಿ: ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ಕೆಮ್ರಾಲ್ ಗ್ರಾಮ ಪಂಚಾಯಿತಿ ಜಂಟಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಸುಮಾರು 16.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಹೊಸಕಾಡು ನೂತನ ಅಂಗನವಾಡಿ ಕೇಂದ್ರಕ್ಕೆ ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಅವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಮೂಲಕ ಅಭಿವೃದ್ಧಿಗೆ ಸರಕಾರ ಒತ್ತು ನೀಡುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಮ್ರಾಲ್ ಗ್ರಾ. ಪಂ.ಅಧ್ಯಕ್ಷೆ ಲೀಲಾ ಕೃಷ್ಣಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷ ಸುರೇಶ್ ಪಂಜ, ಸದಸ್ಯರಾದ ಮಯ್ಯದ್ದಿ, ರೇವತಿ, ನಾಗೇಶ್ಅಂಚನ್, ಜಾಕ್ಸನ್ ಪಕ್ಷಿಕೆರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ನಾಗರತ್ನ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಪ್ರಶಾಂತ್ ಆಳ್ವ, ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
12/09/2021 02:20 pm