ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಜಾತ್ಯತೀತ ಸಮಾಜದ ಕಲ್ಪನೆ ಅಗತ್ಯ; ಹರಿಕೃಷ್ಣ ಪುನರೂರು

ಮುಲ್ಕಿ: ಬ್ರಹ್ಮ ಶ್ರೀ ನಾರಾಯಣ ಗುರುಗಳು ಅಸ್ಪೃಶ್ಯತೆಯ ವಿರುದ್ಧ ಹೋರಾಡಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶವನ್ನು ನೀಡಿದ್ದು ಜಾತಿಗಳ ನಡುವಿನ ಸಂಘರ್ಷ ಇಂದಿನ ದಿನಗಳಲ್ಲಿ ನಾರಾಯಣ ಗುರುಗಳ ಸಂದೇಶವನ್ನು ಪರಿಪಾಲಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ, ನಾರಾಯಣ ಗುರುಗಳು ಸಮಾನತೆ ಮತ್ತು ಸಂಘಟನೆಯ ಮೂಲಕ ಸಮಾಜವನ್ನು ಬದಲಿಸಿರುವ ಮಹಾನ್ ಸುಧಾರಕ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.

ಮುಲ್ಕಿ ಶ್ರೀನಾರಾಯಣ ಗುರು ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಶ್ರೀ ನಾರಾಯಣ ಗುರು ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಗುರು ನಡೆ-ಗ್ರಾಮದೆಡೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಚಾಲಕ ಎಚ್.ವಿ.ಕೋಟ್ಯಾನ್ ವಹಿಸಿದ್ದರು.

ಬ್ರಹ್ಮ ಶ್ರೀ ನಾರಾಯಣ ಗುರುಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಮುಲ್ಕಿ ಸರ್ಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ಮಾತನಾಡಿ, ಶ್ರೀ ನಾರಾಯಣ ಗುರುಗಳು ವಿಶ್ವಧರ್ಮದ ಪ್ರತಿಪಾದಕರಾಗಿ ಜಗತ್ತಿಗೆ ಶ್ರೇಷ್ಠ ಮಾನವ ಧರ್ಮವನ್ನು ಪಸರಿಸಿದ ಸರ್ವ ಶ್ರೇಷ್ಠ ಸಂತ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತ್ ಸ್ಕೌಟ್ ಎಂಡ್ ಗೈಡ್ಸ್‌ನ ಜಿಲ್ಲಾ ಸಹಾಯಕ ಆಯುಕ್ತ ಎಂ. ಸರ್ವೋತ್ತಮ ಅಂಚನ್ ಕಾರ್ಯಕ್ರಮದಲ್ಲಿ ಮಾತನಾಡಿ ಮಂಗಳೂರು ವಿ.ವಿ. ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠವು ನಾರಾಯಣ ಗುರುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಸಮಸ್ತ ಸಮುದಾಯಕ್ಕೆ ತಲುಪಿಸುವ ಪ್ರಯತ್ನ ನಡೆಸುತ್ತಿದೆಯೆಂದು ಹೇಳಿದರು.

Edited By : Vijay Kumar
Kshetra Samachara

Kshetra Samachara

16/09/2021 10:36 pm

Cinque Terre

4.06 K

Cinque Terre

0

ಸಂಬಂಧಿತ ಸುದ್ದಿ