ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ವಿಶ್ವಕರ್ಮ ಜಯಂತಿ

ಬಂಟ್ವಾಳ: ತಾಲೂಕು ಆಡಳಿತದ ವತಿಯಿಂದ ವಿಶ್ವಕರ್ಮ ಜಯಂತಿಯನ್ನು ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಶುಕ್ರವಾರ ಆಚರಿಸಲಾಯಿತು.

ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ದೀಪ ಬೆಳಗಿಸಿ ಪುಷ್ಪಾರ್ಚನೆಗೈದರು. ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಅಣ್ಣು ನಾಯ್ಕ್, ಆಹಾರ ಶಿರಸ್ತೇದಾರ್ ರಾಜೇಶ್ ನಾಯ್ಕ್, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಪತ್ರಕರ್ತ, ರಂಗನಿರ್ದೇಶಕ ಮೌನೇಶ್ ವಿಶ್ವಕರ್ಮ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/09/2021 07:59 pm

Cinque Terre

1.98 K

Cinque Terre

0

ಸಂಬಂಧಿತ ಸುದ್ದಿ