ಕುಂದಾಪುರ: ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ದೇಶಕ್ಕೆ 21ನೇ ರ‍್ಯಾಂಕ್ ಮತ್ತು ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ 29ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ವೈಷ್ಣವಿಯನ್ನು ಇಂದು ಸನ್ಮಾನಿಸಲಾಯಿತು.ಸಂಸ್ಥೆಯ ವಿದ್ಯಾರ್ಥಿನಿ ವೈಷ್ಣವಿ ಅವರಿಗೆ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಷನ್ ಸಂಸ್ಥೆಯ ವತಿಯಿಂದ ಐವತ್ತು ಸಾವಿರ ಬಹುಮಾನ ನೀಡಿ ಗೌರವಿಸಲಾಯಿತು. ಸಂಸ್ಥೆಯ ಸಂಸ್ಥಾಪಕರುಗಳಾದ ಪ್ರತಾಪಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿ ಮತ್ತು ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಬಹುಮಾನದ ಮೊತ್ತ ವಿತರಿಸಿದರು.ಅತ್ಯಂತ ಕಠಿಣ ಪರೀಕ್ಷೆಯಲ್ಲೊಂದಾದ ಸಿಎ ಪರೀಕ್ಷೆಯಲ್ಲಿ ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಹದ್ದು.
ಪರೀಕ್ಷೆ ತೇರ್ಗಡೆ ಹೊಂದುವುದೇ ಕಬ್ಬಿಣದ ಕಡಲೆಯಾಗಿರುವ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ 29ನೇ ರ್ಯಾಂಕ್ ಪಡೆಯುವುದು ನಮ್ಮ ಪರಿಸರದ ಅನೇಕ ವಿದ್ಯಾರ್ಥಿಗಳ ಪಾಲಿಗೆ ದಾರಿದೀಪವಾಗಲಿದೆ ಎಂದು ಶಿಕ್ಷ ಪ್ರಭಾ ಸಂಸ್ಥೆಯ ನಿರ್ದೇಶಕರಾಗಿರುವ ಪ್ರತಾಪ್ ಚಂದ್ರ ಶೆಟ್ಟಿ ಅವರು ಶುಭಹಾರೈಸಿದರು.
Kshetra Samachara
21/09/2021 05:46 pm