ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಪೌರಕಾರ್ಮಿಕರು ಊರಿನ ರಾಯಭಾರಿಗಳು; ಸುಭಾಷ್ ಶೆಟ್ಟಿ

ಮುಲ್ಕಿ: ಪೌರಕಾರ್ಮಿಕರು ಊರಿನ ರಾಯಭಾರಿಗಳು ಸಹಿತ ಆರೋಗ್ಯ ರಕ್ಷಕರಾಗಿದ್ದಾರೆ ಎಂದು ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ ಹೇಳಿದ್ದಾರೆ.

ಮುಲ್ಕಿ ನಗರ ಪಂಚಾಯತ್‌ನಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರ ಪೂಜಾರಿ ಮಾತನಾಡಿ, ಕೊರೊನಾ ಸಂಕಷ್ಟದ ದಿನಗಳಲ್ಲಿ ಪೌರಕಾರ್ಮಿಕ ಸಿಬ್ಬಂದಿ ಸೇವೆ ಶ್ಲಾಘನೀಯವಾಗಿದ್ದು ಕಾರ್ಮಿಕರಿಗೆ ಸರಕಾರ ಉತ್ತಮ ಸವಲತ್ತುಗಳನ್ನು ನೀಡಿದೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್, ಸದಸ್ಯರಾದ ವಿಮಲ ಪೂಜಾರಿ, ಪುತ್ತು ಬಾವ, ಹರ್ಷ ರಾಜ ಶೆಟ್ಟಿ, ಯೋಗೀಶ್ ಕೋಟ್ಯಾನ್, ಬಾಲಚಂದ್ರ ಕಾಮತ್, ವಂದನ ಕಾಮತ್, ರಾಧಿಕಾ ಕೋಟ್ಯಾನ್, ದಯಾವತಿ ಅಂಚನ್, ಶಾಂತಾ ಕಿರೋಡಿಯನ್, ಮಂಜುನಾಥ ಕಂಬಾರ, ಸಂದೀಪ್ ಕುಮಾರ್, ಆರೋಗ್ಯಾಧಿಕಾರಿ ರಾಜೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಳೆದ ಹಲವಾರು ವರ್ಷಗಳಿಂದ ನಗರ ಪಂಚಾಯತ್ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಅಂಚಿನಲ್ಲಿರುವ ಸೂಪರ್ವೈಸರ್ ಸುಂದರ್ ಅವರನ್ನು ಗೌರವಿಸಲಾಯಿತು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Edited By : PublicNext Desk
Kshetra Samachara

Kshetra Samachara

23/09/2021 10:30 am

Cinque Terre

4.72 K

Cinque Terre

0

ಸಂಬಂಧಿತ ಸುದ್ದಿ