ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು: ಸ್ವಚ್ಛ ಗ್ರಾಮದ ಪರಿಕಲ್ಪನೆಯಿಂದ ಗ್ರಾಮದ ಅಭಿವೃದ್ಧಿ ಸಾಧ್ಯ: ಮನೋಹರ ಕೋಟ್ಯಾನ್

ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಕ್ವ ರಸ್ತೆಗಳ ಇಕ್ಕೆಲಗಳಲ್ಲಿ ಮರದ ಗೆಲ್ಲುಗಳನ್ನು ಹಾಗೂ ಹುಲ್ಲು ಕಸ ಕಡ್ಡಿಗಳನ್ನು ತೆರವು ಗೊಳಿಸುವುದರ ಮೂಲಕ ಕಕ್ವ ಫ್ರೆಂಡ್ಸ್, ಸದಸ್ಯರು ಶ್ರಮದಾನ ನಡೆಸಿದರು.ಈ ಸಂದರ್ಭ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಸ್ವಚ್ಛ ಗ್ರಾಮದ ಪರಿಕಲ್ಪನೆಯ ಮೂಲಕ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದರು. ಶ್ರಮದಾನದಲ್ಲಿ ಪಂಚಾಯತ್ ಸದಸ್ಯರಾದ ಸುಧಾಕರ ಶೆಟ್ಟಿ, ಜಯಕುಮಾರ್ ಉಪಸ್ಥಿತರಿದ್ದು ಸ್ವಚ್ಛತೆ ಮಾಡಲು ಸಹಕರಿಸಿದರು.

Edited By : PublicNext Desk
Kshetra Samachara

Kshetra Samachara

26/09/2021 03:39 pm

Cinque Terre

2.56 K

Cinque Terre

0

ಸಂಬಂಧಿತ ಸುದ್ದಿ