ಮಂಗಳೂರು;ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಸೋಮವಾರ ಮಂಗಳೂರು ನಗರದ ಓಷಿಯನ್ ಪರ್ಲ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಉದ್ಘಾಟಿಸಿದರು.
ಇದೇ ವೇಳೆ ಮಾತನಾಡಿದ ಅವರು, ಪ್ರವಾಸೋದ್ಯಮದಲ್ಲಿ ನಿರೀಕ್ಷಿತ ಅಭಿವೃದ್ದಿಯನ್ನು ಕಂಡಿಲ್ಲ. ಇದಕ್ಕಾಗಿ ಜಿಲ್ಲೆಯಲ್ಲಿ ಎಲ್ಲಾ ಕ್ಷೇತ್ರಗಳಿಗೂ ಪೂರಕವಾದ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಬೇಕು. ದಕ್ಷಿಣ ಕನ್ನಡ
ಜಿಲ್ಲೆಯಲ್ಲಿ ಅಭಿವೃದ್ಧಿಯ ನಿಟ್ಟಿನಲ್ಲಿ ಸ್ಪಷ್ಟವಾದ ಕಲ್ಪನೆಯ ಅಗತ್ಯವಿದ್ದು, ಅದಕ್ಕೆ ಪೂರಕವಾಗಿ ಸರಕಾರ ಯೋಜನೆಗಳನ್ನು ರೂಪಿಸಲಿದೆ. ಇದರ ಜತೆಗೆ ಉದ್ಯಮಗಳಿಗೆ ಪೂರಕವಾಗಿ ಸರಕಾರದ ಕೆಲವೊಂದು ನೀತಿಗಳನ್ನು ಸರಳೀಕರಿಸುವ ಕಾರ್ಯವೂ ಆಡಳಿತ ವರ್ಗದಿಂದ ಆಗಬೇಕಾಗಿದೆ
ಎಂದರು. ಸ್ಥಳೀಯ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ನಗರಾಭಿವೃದ್ದಿ ಪ್ರಾಧಿಕಾದ ಅಧ್ಯಕ್ಷ ರವಿಶಂಕರ್ ಮಿಜಾರು, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗಡೆ ಇದ್ದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ ಸ್ವಾಗತಿಸಿದರು.
Kshetra Samachara
27/09/2021 05:40 pm