ಕಾರ್ಕಳ: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಉಡುಪಿ ಸಹಯೋಗದಲ್ಲಿ ಸೋಮವಾರ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಸಭಾಂಗಣದಲ್ಲಿ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮ ದಿನಾಚರಣೆ ನಡೆಸಲಾಯಿತು.
ನಂದಳಿಕೆ ಅಮನಸ್ಕ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಬೋಳ ಉದಯ್ ಅಂಚನ್ ಭಗತ್ ಸಿಂಗ್‌ರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿ ಮಾತನಾಡಿ, ಭಾರತದ ಸ್ವಾತಂತ್ರ್ಯಕ್ಕಾಗಿ ಸಣ್ಣ ವಯಸ್ಸಿನಲ್ಲಿಯೇ ನೇಣುಗಂಬಕ್ಕೆ ಏರಿದವರು ಭಗತ್‌ಸಿಂಗ್. ಬಡವರು, ಶ್ರೀಮಂತರ ನಡುವಿನ ಕಂದಕ ಬದಲಾಗಲು ಪುರಾತನ ಅಸಮಾನ ವ್ಯವಸ್ಥೆಯನ್ನು ಹೋಗಲಾಡಿಸಲು ಅನೇಕ ಬದಲಾವಣೆ ಅಗತ್ಯ ಎಂದು ಸಾರಿದವರು ಹೇಳಿದವರು ಭಗತ್ ಸಿಂಗ್ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಸಂಚಾಲಕ ಅಬ್ಬನಡ್ಕ ಸಂದೀಪ್ ಪೂಜಾರಿ, ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸುರೇಶ್ ಕಾಸ್ರಬೈಲು, ಸತೀಶ್ ಪೂಜಾರಿ ಕಾರ್ಯದರ್ಶಿ ಹರಿಪ್ರಸಾದ್ ಆಚಾರ್ಯ, ಸದಸ್ಯರಾದ ಸುರೇಶ್ ಅಬ್ಬನಡ್ಕ ಉಪಸ್ಥಿತರಿದ್ದರು.
Kshetra Samachara
27/09/2021 08:00 pm