ಉಡುಪಿ: ಗಾಂಧಿ ಜಯಂತಿ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಇಂದಿನಿಂದ ಮೂರು ದಿನಗಳ ವರೆಗೆ ಜಿಲ್ಲಾ ಉಡುಪಿಯ ಬಿಜೆಪಿ ಕಚೇರಿಯಲ್ಲಿ ಖಾದಿ ಮೇಳ ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕನಸಿನ ಆತ್ಮ ನಿರ್ಭರ ಭಾರತದ ಯೋಜನೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಖಾದಿ ಮೇಳ ಆಯೋಜನೆ ಮಾಡಲಾಗಿದ್ದು, ಖಾದಿ ಬಟ್ಟೆಗಳನ್ನು ಹೆಚ್ಚು ಖರೀದಿ ಮಾಡೋದ್ರಿಂದ ಖಾದಿ ತಯಾರಕರಿಗೂ ಪ್ರೋತ್ಸಾಹ ನೀಡಿದಂತಾಗುತ್ತದೆ ಅಂತ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಇನ್ನು ಖಾದಿ ಮೇಳದಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದಂತೆ ನೂರಾರು ಮಂದಿ ಸಾರ್ವಜನಿಕರು ಖಾದಿ ಉತ್ಪನ್ನಗಳನ್ನು ಖರೀದಿ ಮಾಡಿದರು.
Kshetra Samachara
30/09/2021 07:15 pm