ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿ ಗಾಂಧಿ ಜಯಂತಿ ಆಚರಣೆ

ಉಡುಪಿ: ಉಡುಪಿಯ ಅಜ್ಜರಕಾಡು ಭುಜಂಗ ಪಾರ್ಕಿನಲ್ಲಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಇದೇ ವೇಳೆ ಕಾರ್ಯಕರ್ತರು ಸ್ವಚ್ಛತೆಯಲ್ಲಿ ಪಾಲ್ಗೊಂಡರು.ಭುಜಂಗ ಪಾರ್ಕ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಎಸೆಯಲಾಗಿದ್ದ ,ಬಾಟಲ್ ಗಳು ,ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯಗಳನ್ನು ಕಾರ್ಯಕರ್ತರು ತೆಗೆಯುವ ಮೂಲಕ ಗಾಂಧಿಜಯಂತಿ ಸಂದರ್ಭದಲ್ಲಿ ಶುಚಿತ್ವದ ಸಂದೇಶ ಸಾರಿದರು.

ಉಡುಪಿ ನಗರ ಸಭೆಯ ಅಧ್ಯಕ್ಷ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಸೇರಿದಂತೆ ಸ್ಥಳೀಯ ನಗರಸಭಾ ಸದಸ್ಯರು ಹಾಗೂ ಅಧಿಕಾರಿ ವರ್ಗದವರು ಮತ್ತು ನಗರಸಭೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

02/10/2021 12:00 pm

Cinque Terre

8.04 K

Cinque Terre

0

ಸಂಬಂಧಿತ ಸುದ್ದಿ