ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ಸಚಿವ ಕೋಟ ಸ್ವಚ್ಚತಾ ಕಾರ್ಯ ಆಂದೋಲದಲ್ಲಿ ಭಾಗಿ

ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ನಗರದ ಕದ್ರಿಯಲ್ಲಿರುವ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಹಾಸ್ಟೆಲ್ ನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ವಚ್ಚತಾ ಆಂದೋಲನದಲ್ಲಿ ಭಾಗವಹಿಸಿ ಸ್ವಚ್ಚತಾ ಕಾರ್ಯವನ್ನು ನೆರವೇರಿಸಿದರು.

ರಾಜ್ಯದ ಎಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ವಸತಿ ಶಾಲೆ ಹಾಗೂ ಹಾಸ್ಟೆಲ್ ಗಳಲ್ಲಿ ಇಂದು ಬೆಳಗ್ಗೆ ಏಕಕಾಲದಲ್ಲಿ ಸ್ವಚ್ಚತಾ ಆಂದೋಲನ‌ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಕದ್ರಿಯಲ್ಲಿರುವ ಹಾಸ್ಟೆಲ್ ನಲ್ಲಿ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದರು.

ಸಚಿವರು ಈ ಸಂದರ್ಭ ಇಡೀ ಹಾಸ್ಟೆಲ್ ನ ಒಳಗೆ ಹಾಗೂ ಹೊರಾಂಗಣದ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದರು.ಈ ಸಂದರ್ಭ ಸಚಿವರೊಂದಿಗೆ ಹಾಸ್ಟೆಲ್ ವಿದ್ಯಾರ್ಥಿಗಳು, ಸಿಬ್ಬಂದಿ, ಇಲಾಖೆಯ ಸಚಿವರು ಕೂಡಾ ಸ್ವಚ್ಚತಾ ಕಾರ್ಯದಲ್ಲಿ ಕೈಜೋಡಿಸಿದ್ದಾರೆ‌. ಇದೇ ವೇಳೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಬೆಳಗ್ಗಿನ ಉಪಹಾರ ಸೇವಿಸಿದರು.

Edited By : Shivu K
Kshetra Samachara

Kshetra Samachara

02/10/2021 02:05 pm

Cinque Terre

12.28 K

Cinque Terre

0

ಸಂಬಂಧಿತ ಸುದ್ದಿ