ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕೃಷಿಕರು, ಯೋಧರಿಗೆ ಸನ್ಮಾನ‌

ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಸಹಯೋಗದೊಂದಿಗೆ ಜೈ ಜವಾನ್ ಜೈಕಿಸಾನ್ ಸನ್ಮಾನ ಕಾರ್ಯಕ್ರಮವು ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಳೆದ ಐದು ದಶಕಗಳಿಂದ ನಿರಂತರವಾಗಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡು ಕರಾವಳಿ ಜಿಲ್ಲೆಯ ಪ್ರಗತಿಪರ ಕೃಷಿ ಮಾಹಿತಿದಾರರಾಗಿ ಉತ್ತಮ ಸಾಧನೆಗೈದ ಕೆ. ಸತೀಶ್ ಕುಮಾರ್ ಶೆಟ್ಟಿ ಯಡ್ತಾಡಿ ಇವರನ್ನು ಸನ್ಮಾನಿಸಲಾಯಿತು. ಜೊತೆಗೆ ಕಳೆದ ಹಲವು ವರ್ಷಗಳ ಹಿಂದೆ ಭಾರತೀಯ ಸೇನೆಯಲ್ಲಿ ಯೋಧರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ ನಂತರ ಸ್ವ ಉದ್ಯೋಗದಲ್ಲಿ ಸಾಧನೆಗೈದ ಎಲ್ಲೂರು ಬಾಲಕೃಷ್ಣ ಭಂಡಾರಿಯವರನ್ನು ಸನ್ಮಾನಿಸಲಾಯಿತು .ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಅಶೋಕ್ ಕೊಡವರು, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಉದ್ಯಾವರ ನಾಗೇಶ್, ರಮೇಶ್ ಕಾಂಚನ್, ವಿಖ್ಯಾತ್ ಶೆಟ್ಟಿ, ಮತ್ತಿತ್ತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/10/2021 12:54 pm

Cinque Terre

3.54 K

Cinque Terre

0

ಸಂಬಂಧಿತ ಸುದ್ದಿ