ಬೈಂದೂರು: ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 1 ಕೋಟಿ 22 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ನೂತನ ಕೊಠಡಿಗಳನ್ನು ಇಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಸಚಿವರು, "ಈ ಭಾಗದ ಹೆಚ್ಚಿನ ಜನರು ಮೀನುಗಾರಿಕೆ ಮತ್ತು ಕೂಲಿ ಕಾರ್ಮಿಕರಾಗಿದ್ದು, ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶಕ್ಕಾಗಿ ಸುಸಜ್ಜಿತ ಕಟ್ಟಡಗಳನ್ನು ಸರಕಾರದ ವತಿಯಿಂದ ನಿರ್ಮಿಸಲಾಗಿದೆ. ಈ ಸೌಲಭ್ಯದ ಸದುಪಯೋಗ ಎಲ್ಲರೂ ಪಡೆದುಕೊಳ್ಳಲಿ ಎಂದು ಹಾರೈಸಿದರು.
ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಾಜಶೇಖರ್ ನಾವುಂದ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮನೋಹರ್ ಶೆಟ್ಟಿ , ಕಾಲೇಜು ಪ್ರಿನ್ಸಿಪಾಲ್ ಅರುಣ್ ಗಂಗಾಧರ್ ನಾಯಕ್, ವೈಸ್ ಪ್ರಿನ್ಸಿಪಾಲ್ ಶಶಿಕಲಾ ನಾಯಕ್, ಮತ್ತು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಶಿಕ್ಷಕ ಗಣೇಶ್ ನಿರೂಪಿಸಿದರು.
Kshetra Samachara
06/10/2021 09:09 pm