ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ನಿರಂತರ ಒಂಬತ್ತು ದಿನದ ಭಜನಾ ಸಂಕೀರ್ತನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ದುಗ್ಗಣ್ಣ ಸಾವಂತರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ "ಲೋಕಾ ಸಮಸ್ತ ಸುಖಿನೋ ಭವಂತು" ಎಂಬಂತೆ ಭಜನೆ ಮೂಲಕ ದೇವರ ಭಕ್ತಿ ನಿರಂತರವಾಗಿರಲಿ ಎಂದರು.
ಈ ಸಂದರ್ಭ ಲಯನ್ಸ್ ವಲಯಾಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ರಂಗಕರ್ಮಿ ಚಂದ್ರಶೇಖರ ಸುವರ್ಣ, ಯುವಕ ವೃಂದದ ಅಧ್ಯಕ್ಷ ಕೃಷ್ಣ ಶೆಟ್ಟಿ, ಮಾಜೀ ಅಧ್ಯಕ್ಷ ಶಿವಣ್ಣ ಶೆಟ್ಟಿ, ಗೌರವಾಧ್ಯಕ್ಷ ಮಹೀಮ್ ಹೆಗ್ಡೆ, ಭಜನಾ ಸಂಚಾಲಕ ರಮೇಶ್ ದೇವಾಡಿಗ, , ಪ್ರಸಾದ್ ಭಟ್ ಮತ್ತಿತರರು ಉಪಸ್ಥಿತರಿದ್ದರು. ಯುವಕ ವೃಂದದ ಮಾಜೀ ಕಾರ್ಯದರ್ಶಿ ಹರಿಶ್ಚಂದ್ರ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಭಜನಾ ಸಂಕೀರ್ತನೆ ಕಾರ್ಯಕ್ರಮ ನಡೆಯಿತು.
Kshetra Samachara
07/10/2021 06:26 pm