ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 30 ಮಂದಿ ಹಿರಿಯ ಯಕ್ಷಗಾನ ಕಲಾವಿದರಿಗೆ “ಪಾತಾಳ ಕಲಾ ಮಂಗಳ ಪ್ರಶಸ್ತಿ ಪ್ರದಾನ, ತಲಾ ಹತ್ತು ಸಾವಿರ ಗೌರವ ಧನ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಯಕ್ಷಗಾನ ಕಲಾವಿದರಿಗೆ

ಧರ್ಮಸ್ಥಳ ಯಕ್ಷಗಾನ ಮೇಳದ ಹಿರಿಯ ಕಲಾವಿದ ಪಾತಾಳ ವೆಂಕಟ್ರಮಣ ಭಟ್ ಪ್ರಾಯೋಜಕತ್ವದಲ್ಲಿ ರಾಜ್ಯದ ಮೂವತ್ತು ಮಂದಿ ಹಿರಿಯ ಕಲಾವಿದರಿಗೆ “ಪಾತಾಳ ಕಲಾ ಮಂಗಳ ಪ್ರಶಸ್ತಿ ಪ್ರದಾನದೊಂದಿಗೆ ತಲಾ ಹತ್ತು ಸಾವಿರ ರೂ. ಗೌರವ ಧನ ನೀಡಿ ರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ ವೀರೇಂದ್ರ ಹೆಗ್ಗಡೆ ಯಕ್ಷಗಾನ ಕಲಾವಿದರು ದೀರ್ಘಾಯುಷಿಗಳಾಗಿ ಹೊಸ ಕಲಾವಿದರನ್ನು ಪ್ರೋತ್ಸಾಹಿಸಬೇಕು.

ಧರ್ಮಸ್ಥಳ ಮೇಳಕ್ಕೆ 200 ವರ್ಷಗಳ ಭವ್ಯ ಇತಿಹಾಸವಿದ್ದು, ಮೈಸೂರು ಮಹಾರಾಜರು ಮೇಳದ ಕಲಾವಿದರನ್ನು ತಮ್ಮ ಅರಮನೆಗೆ ಆಹ್ವಾನಿಸಿ ಯಕ್ಷಗಾನ ಪ್ರದರ್ಶನ ವೀಕ್ಷಿಸಿ ಮೆಚ್ಚಿರುವುದನ್ನು ಉಲ್ಲೇಖಿಸಿದರು.ಧರ್ಮಸ್ಥಳ ಮೇಳದಲ್ಲಿ ವಿಟ್ಲ ಗೋಪಾಲಕೃಷ್ಣ ಜೋಶಿ, ಶೇಣಿ ಗೋಪಾಲಕೃಷ್ಣ ಭಟ್, ಕುಂಬ್ಳೆ ಸುಂದರರಾವ್, ಕೆ. ಗೋವಿಂದ ಭಟ್, ಪುತ್ತೂರು ನಾರಾಯಣ ಹೆಗ್ಡೆ, ಶ್ರೀಧರ ಭಂಡಾರಿ, ಉಬರಡ್ಕ ಉಮೇಶ್ ಶೆಟ್ಟಿ ಮೊದಲಾದವರ ಕಲಾ ಸೇವೆ, ಸಾಧನೆಯನ್ನು ಸ್ಮರಿಸಿದರು.

Edited By : Nagesh Gaonkar
Kshetra Samachara

Kshetra Samachara

07/10/2021 10:22 pm

Cinque Terre

16.64 K

Cinque Terre

1