ಉಡುಪಿ: ನವರಾತ್ರಿಯ ಪರ್ವಕಾಲದಲ್ಲಿ ಕ್ರಿಸ್ತ ಶಕ ಸುಮಾರು 6ನೇ ಶತಮಾನದಲ್ಲಿ ಪ್ರತಿಷ್ಠಾಪಿಸಲ್ಪಟ್ಟು, ಉಡುಪಿಯ ಶ್ರೀ ಕೃಷ್ಣ ಮಠಕ್ಕೂ ಅವಿನಾಭಾವ ಸಂಬಂಧವಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥರು ಚಿತ್ತೈಸಿ, ದೇವರ ದರ್ಶನ ಪಡೆದರು.
ದೇವಸ್ಥಾನದ ಪವಿತ್ರಪಾಣಿ ಕುಂಜಿತ್ತಾಯ ಶ್ರೀನಿವಾಸ ಉಪಾಧ್ಯಾಯ ಗೌರವ ಸಲ್ಲಿಸಿದರು. ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ, ವ್ಯವಸ್ಥಾಪನಾ ಮಂಡಳಿಯ ಸದಸ್ಯರಾದ ಕೆ.ನಾಗರಾಜ ಶೆಟ್ಟಿ, ಮಂಜುನಾಥ್ ಹೆಬ್ಬಾರ್, ರಮೇಶ್ ಶೇರಿಗಾರ್, ಸಂಧ್ಯಾ ಪ್ರಭು, ಜೀರ್ಣೋದ್ಧಾರ ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.
Kshetra Samachara
08/10/2021 03:08 pm