ಪುತ್ತೂರು: ಡಾ.ಶಿವರಾಮ ಕಾರಂತರ 120ನೇ ಜನ್ಮ ದಿನಾಚರಣೆ ಶಿವರಾಮ ಕಾರಂತರ ಕರ್ಮಭೂಮಿ ಪುತ್ತೂರಿನ ಬಾಲವನದಲ್ಲಿ ನಡೆಯಿತು. ಕನ್ನಡ ಕೀಲಿಮಣೆ ಸಂಶೋಧಕ, ನಾಡೋಜ ಕೆ.ಪಿ.ರಾವ್ ಅವರಿಗೆ ಬಾಲವನ ಪ್ರಶಸ್ತಿ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ತನ್ನ ಬರವಣಿಗೆ ಮೂಲಕ ಸಾಧನೆ ಮಾಡಿದ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಅವರಿಗೆ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ನಮ್ಮ ಹಿರಿಯರು ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದು, ರಂಗಭೂಮಿ, ಚಿತ್ರಕಲೆ, ಯಕ್ಷಗಾನ ಮುಂತಾದ ಹಲವಾರು ಕ್ಷೇತ್ರದಲ್ಲಿ ಅಪಾರ ಜ್ಞಾನ ಹೊಂದಿದ್ದ ಡಾ.ಶಿವರಾಮ ಕಾರಂತರು ಇತಿಹಾಸ ನಿರ್ಮಿಸಿದ್ದಾರೆ ಎಂದರು.
Kshetra Samachara
10/10/2021 05:25 pm