ಮಂಗಳೂರು: ದಸರಾ ಹಿನ್ನೆಲೆಯಲ್ಲಿ ಕುದ್ರೋಳಿ ದೇವಸ್ಥಾನಕ್ಕೆ ಸಿಎಂ ಭೇಟಿ ನೀಡಿದರು. ಉಡುಪಿ ಪ್ರವಾಸ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಆಗಮಿಸಿದ ಬೊಮ್ಮಾಯಿ ಕುದ್ರೋಳಿ ಶ್ರೀಗೋಕರ್ಣನಾಥ ದೇವರ ದರ್ಶನ ಪಡೆದರು. ಬಳಿಕ ನವದುರ್ಗೆಯರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಇದೇ ವೇಳೆ ಸಿಎಂ ,ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರ ಆಶೀರ್ವಾದ ಪಡೆದರು. ಈ ಕ್ಷಣ ಬೊಮ್ಮಾಯಿಯವರ ಮುಖ ಸವರಿ ಜನಾರ್ಧನ ಪೂಜಾರಿ ಭಾವುಕರಾದರು. ಬಳಿಕ ಶಾರದೆಗೆ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿಯವರನ್ನು ಶಾಲು ಹೊದಿಸಿ ಪೂಜಾರಿ ಮತ್ತು ಕ್ಷೇತ್ರದ ಆಡಳಿತ ಮಂಡಳಿ ಸನ್ಮಾನಿಸಿದರು. ಈ ಸಂದರ್ಭ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕರಾವಳಿಯ ಶಾಸಕರು ಸಾಥ್ ನೀಡಿದರು. ಸಿಎಂ ಭೇಟಿ ಹಿನ್ನೆಲೆಯಲ್ಲಿ ಕುದ್ರೋಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು.
Kshetra Samachara
13/10/2021 09:42 pm