ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಪುತ್ತೂರು ದೇಂದಡ್ಕ ಗೆಳೆಯರ ಮತ್ತು ಗೆಳತಿಯರ ಬಳಗ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಊರ ಪರವೂರ ಭಕ್ತಾಭಿಮಾನಿಗಳ ಸಹಕಾರದೊಂದಿಗೆ 19ನೇ ವರುಷದ ಸಾಮೂಹಿಕ ಶ್ರೀ ಶನಿಪೂಜೆ ಜರುಗಿತು.
ದೇವಳದ ಪ್ರಧಾನ ಅರ್ಚಕ ವೇ.ಮೂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಶನಿ ಪೂಜೆ ನಡೆಯಿತು.
ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭ ಬಳಗದ ಸದಸ್ಯರು ಹಾಗೂ ಊರ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
Kshetra Samachara
23/10/2021 05:11 pm