ಮಂಗಳೂರು: ನಗರದ ತಣ್ಣೀರುಬಾವಿಯ ಸಮುದ್ರ ತೀರದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮ ನಡೆಯಿತು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರಕಾರದ ನಿರ್ದೇಶನದಂತೆ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 'ಕನ್ನಡಕ್ಕಾಗಿ ನಾವು' ಅಭಿಯಾನಕ್ಕಾಗಿ ತಣ್ಣೀರುಬಾವಿ ಬೀಚ್‍ನಲ್ಲಿ ಕನ್ನಡ ಭಾಷೆಯ ಮಹತ್ವ ಸಾರುವ ಲಕ್ಷ ಕಂಠಗಳ ಸಮೂಹ ಗೀತ ಗಾಯನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಗೀತಗಾಯನ ಕಾರ್ಯಕ್ರಮದಲ್ಲಿ ಡೊಂಗರಕೇರಿಯ ಕೆನರಾ ಪ್ರೌಢಶಾಲೆ, ಕೊಡಿಯಾಲ್ ಬೈಲ್‍ನ ಶಾರದ ವಿದ್ಯಾಲಯ, ಸುರತ್ಕಲ್‍ನ ಗೋವಿಂದ ದಾಸ್ ಪಿಯು ಕಾಲೇಜು, ರಥಬೀದಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಸೆಂಟ್ ಹಾಗೂ ಬಲ್ಮಠ ಮಹಿಳಾ ಕಾಲೇಜಿನ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕನ್ನಡ ಗೀತ ಗಾಯನ ಮಾಡಿದರು.
ಈ ಸಂದರ್ಭ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಯವರು ದೈನಂದಿನ ವ್ಯವಹಾರಗಳಲ್ಲಿ ಕನ್ನಡ ಭಾಷೆಯನ್ನೇ ಬಳಸುವ ಕುರಿತು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಆಡಳಿತ, ಪತ್ರವ್ಯವಹಾರ ಸೇರಿದಂತೆ ಪ್ರತಿ ಸಂದರ್ಭದಲ್ಲೂ ಕನ್ನಡವನ್ನೇ ಬಳಸುವುದರ ಜತೆಗೆ ಕನ್ನಡ ನಾಡಿನಲ್ಲಿ ವಾಸಿಸುವ ಕನ್ನಡೇತರ ಭಾಷಿಕರಿಗೆ ಪ್ರೀತಿಯಿಂದ ಕನ್ನಡವನ್ನು ಕಲಿಸುವುದಾಗಿ ಎಲ್ಲರೂ ಪ್ರತಿಜ್ಞೆಯನ್ನು ಸ್ವೀಕರಿಸಿದರು.
Kshetra Samachara
28/10/2021 06:40 pm