ಉಡುಪಿ: ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಇಂದು 66ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಜರುಗಿತು.
ಕನ್ನಡ ಸಂಸ್ಕೃತಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ
'ನಿತ್ಯೋತ್ಸವ' ಗಾನ ಸೊಬಗಿಗೆ ಸಚಿವರು ಗೌರವ ವಂದನೆ ಸ್ವೀಕರಿಸಿದರು.
ಇದಕ್ಕೂ ಮುನ್ನ ಸಚಿವರು ತಾಯಿ ಭುವನೇಶ್ವರಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಪೊಲೀಸ್ ಮತ್ತಿತರ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಜಿಲ್ಲಾಡಳಿತದ ವತಿಯಿಂದ ನಡೆದ ಈ ಕನ್ನಡ ಹಬ್ಬದಲ್ಲಿ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
Kshetra Samachara
01/11/2021 09:47 am