ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಕನ್ನಡ ಭಾಷೆ ಚೈತನ್ಯ ಶಕ್ತಿಯಾಗಿ ಎಲ್ಲಾ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿದೆ ಕಾಪು ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ

ಕಾಪು : ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ 66 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಭಾಷೆ ಜನರನ್ನು ಒಗ್ಗುಡಿಸುತ್ತದೆ.ಕನ್ನಡ ಭಾಷೆಯ ಬಗ್ಗೆ ಜನರಲ್ಲಿ ಅಭಿಮಾನ ಹಿಂದೆಗಿಂತಲೂ ಹೆಚ್ಚಾಗಿದೆ, ಕನ್ನಡ ಭಾಷೆ ಚೈತನ್ಯ ಶಕ್ತಿಯಾಗಿ ಎಲ್ಲಾ ಕ್ಷೇತ್ರಗಳಲ್ಲಿ ಮುನ್ನುಗ್ಗುತ್ತಿದೆ ಎಂದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಧ್ಯಕ್ಷತೆ ವಹಿಸಿದ್ದರು.

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ತಾ.ಪಂ. ಕಾರ್ಯ ನಿರ್ವಾಹಣಾಧಿಕಾರಿ ವಿವೇಕಾನಂದ ಗಾಂವ್ಕರ್, ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ವೃತ್ತ ನಿರೀಕ್ಷಕ ಪ್ರಕಾಶ್, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಅನಿಲ್ ಕುಮಾರ್, ಕಾಪು ಎಸ್ಸೈ ರಾಘವೇಂದ್ರ ಸಿ., ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್, ಕಾಪು ತಾಲೂಕು ಸಾಹಿತ್ಯ ಪರಿಷತ್ ನ ನಿಕಟಪೂರ್ವ ಅಧ್ಯಕ್ಷ ಪುಂಡಲೀಕ ಮರಾಠೆ, ಮಾಜಿ ಜಿ.ಪಂ‌. ಸದಸ್ಯೆ ಶಿಲ್ಪಾ ಜಿ. ಸುವರ್ಣ ಮತ್ತಿತರರು ಉಪಸ್ಥಿತರಿದ್ದರು

Edited By : Manjunath H D
Kshetra Samachara

Kshetra Samachara

01/11/2021 11:53 am

Cinque Terre

4.51 K

Cinque Terre

0

ಸಂಬಂಧಿತ ಸುದ್ದಿ