ಮುಲ್ಕಿ: ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಅನೇಕ ಶಾಲೆಗಳಲ್ಲಿ ಸಂಘ-ಸಂಸ್ಥೆಗಳಲ್ಲಿ ಕನ್ನಡ ರಾಜ್ಯೋತ್ಸವದ ವಿಜ್ರಂಭಣೆಯಿಂದ ಆಚರಿಸಲಾಯಿತು
ಮೂಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ಸಹಯೋಗದೊಂದಿಗೆ ಶಾಲಾ ಮೈದಾನದಲ್ಲಿ ಕನ್ನಡ ಧ್ವಜಕ್ಕೆ ಗೌರವ ಸಲ್ಲಿಸುವ ಮೂಲಕ ರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ.ವಾಸುದೇವ ಬೆಳ್ಳೆ ಮಾತನಾಡಿ ಮಕ್ಕಳಿಗೆ ಕನ್ನಡ ಭಾಷೆಯ ಮಹತ್ವವನ್ನು ತಿಳಿಸಿ ಆಂಗ್ಲ ಮಾಧ್ಯಮ ಜೊತೆಗೆ ಕನ್ನಡ ಭಾಷೆಯನ್ನು ಮರೆಯದಿರಿ ಎಂದು ಕಿವಿಮಾತು ಹೇಳಿದರು. ಪ್ರೌಢಶಾಲಾ ಮುಖ್ಯಶಿಕ್ಷಕಿ ಜಯ ಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು. ಉಪನ್ಯಾಸಕ ಅಶೋಕ್ ಭಂಡಾರಿ ನಿರೂಪಿಸಿದರು.
ಮುಲ್ಕಿ ವ್ಯಾಸಮಹರ್ಷಿ ಶಾಲೆಯಲ್ಲಿ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಎಂ. ಪಾಂಡುರಂಗ ಭಟ್ ವಹಿಸಿದ್ದರು. ಕಾರ್ಯದರ್ಶಿ ರಾಮದಾಸ್ ಕಾಮತ್ , ಪ್ರಾಂಶುಪಾಲೆ ಚಂದ್ರಿಕಾ ಭಂಡಾರಿ, ಉಪಸ್ಥಿತರಿದ್ದರು. ಕಳೆದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಬಳಿಕ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಮುಲ್ಕಿ ತಾಲೂಕು ವ್ಯಾಪ್ತಿಯ ಕಿನ್ನಿಗೋಳಿ,ಕಟೀಲು ಹಳೆಯಂಗಡಿ, ಪಕ್ಷಿಕೆರೆ ಪರಿಸರದ ವಿವಿಧ ಸರಕಾರಿ ಕಾಲೇಜು ಶಾಲಾ ಸಂಘ-ಸಂಸ್ಥೆಗಳಲ್ಲಿ ರಾಜ್ಯೋತ್ಸವ ಆಚರಿಸಲಾಯಿತು.
Kshetra Samachara
01/11/2021 03:12 pm