ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೀಪಾವಳಿ ಆಚರಣೆ ವಿಜೃಂಭಣೆಯಿಂದ ನಡೆಯಿತು.
ದೇವಸ್ಥಾನದಲ್ಲಿ ವೇದಮೂರ್ತಿ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಶ್ರೀ ದೇವರಿಗೆ ರಂಗಪೂಜೆ, ಬಲೀಂದ್ರ ಪೂಜೆ, ಶ್ರೀ ದೇವರ ಬಲಿ ಉತ್ಸವ ನಡೆಯಿತು.
ಈ ಸಂದರ್ಭ ಅರ್ಚಕ ಶ್ರೀಪತಿ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿ, ಕೊರೊನಾ ಮಹಾಮಾರಿ ದೂರವಾಗಿ ವಿಶ್ವದೆಲ್ಲೆಡೆ ಶಾಂತಿ ನೆಲೆಸಲಿ. ಶುಕ್ರವಾರ ಸಂಜೆ ದೇವಸ್ಥಾನದಲ್ಲಿ ಗೋ ಪೂಜೆ ನಡೆಯಲಿದೆ ಎಂದರು.
ಅರ್ಚಕ ನರಸಿಂಹ ಭಟ್, ಗೋಪಾಲಕೃಷ್ಣ ಭಟ್, ಉದ್ಯಮಿ ಅತುಲ್ ಕುಡ್ವ, ನಿವೃತ್ತ ಬ್ಯಾಂಕ್ ಅಧಿಕಾರಿ ಸತೀಶ್ ಭಂಡಾರಿ, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಮುಲ್ಕಿ ರೋಟರಿ ಕ್ಲಬ್ ಅಧ್ಯಕ್ಷ ಶಿವರಾಮ ಜಿ. ಅಮೀನ್, ಶಿವಶಂಕರ್, ಅಚ್ಚುತ ಭಟ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
04/11/2021 11:03 pm