ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: 'ಸ್ವಚ್ಛತಾ ಅಭಿಯಾನ' ಸೈಕಲ್ ಜಾಥಾ; ನ್ಯಾಯಾಧೀಶರೂ ಭಾಗಿ

ಉಡುಪಿ: ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ ಉಡುಪಿ ನಗರಸಭೆ ಮತ್ತು ಸಂಘ- ಸಂಸ್ಥೆಗಳ ಸಹಯೋಗದೊಂದಿಗೆ ಸ್ವಚ್ಛತಾ ಅಭಿಯಾನದ ಭಾಗವಾಗಿ ಸೈಕಲ್ ಜಾಥಾ ನಡೆಯಿತು.

ಅಜ್ಜರಕಾಡು ವಾರ್ಡ್‌ನ ಕೋರ್ಟ್ ಆವರಣದಿಂದ ಸರ್ವಿಸ್ ಬಸ್ ನಿಲ್ದಾಣದ ವರೆಗೆ ಜನಸಾಮಾನ್ಯರಿಗೆ ಕಾನೂನಿನ ಬಗ್ಗೆ ಮತ್ತು ಘನತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ಬಳಕೆ ನಿಷೇಧದ ಕುರಿತು ಸೈಕಲ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು.

ಜಾಥಾದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ನ್ಯಾಯಾಧೀಶೆ ಶರ್ಮಿಲಾ ಎಸ್. ಸ್ವತಃ ಸೈಕಲ್ ಚಲಾಯಿಸುವ ಮೂಲಕ ಗಮನ ಸೆಳೆದರು. ಶಶಿರೇಖಾ ಹಿರಿಯ ಆರೋಗ್ಯ ನಿರೀಕ್ಷಕರು, ಮನೋಹರ್ ಪೌರ ಸೇವಾ ನೌಕರರ ಸಂಘದ ಅಧ್ಯಕ್ಷ, ಪ್ರತಿಭಾ ಆರ್. ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ, ಸುರೇಂದ್ರ, ದಾಮೋದರ, ರವಿ ಮತ್ತು ಅಧಿಕ ಸಂಖ್ಯೆಯಲ್ಲಿ ಪೌರಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗಿಯಾದರು.

Edited By : PublicNext Desk
Kshetra Samachara

Kshetra Samachara

13/11/2021 02:30 pm

Cinque Terre

3.06 K

Cinque Terre

0