ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರದ ಬಾಲ ವಿಕಾಸ ಸಮಿತಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಶಿಕ್ಷಣ ಸಮಿತಿ ವತಿಯಿಂದ ಅಂಗನವಾಡಿ ಕೇಂದ್ರ ಎರಡರಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ನ.ಪ ಸದಸ್ಯ ವಿಮಲಾ ಎಸ್ ಪೂಜಾರಿಯವರು ವಹಿಸಿ ಮಾತನಾಡಿ, ಭಾರತದ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಂದು ಆಚರಿಸಲಾಗುತ್ತಿದ್ದು, ಮಕ್ಕಳು ದೇವರ ಸಮಾನರು, ಅವರ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ರಾಷ್ಟ್ರವನ್ನು ಬಲಪಡಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಉಡುಪಿಯ ಪ್ರಸಿದ್ಧ ವಕೀಲ ಸಂಕಪ್ಪ. ಎ, ಮುಲ್ಕಿ ನ. ಪ ಸದಸ್ಯ ಮುನ್ನ ಯಾನೆ ಮಹೇಶ್, ನೇತಾಜಿ ಸುಭಾಷ್ ಚಂದ್ರ ಬೋಸ್ ಶಿಕ್ಷಣ ಸಮಿತಿಯ ಅಧ್ಯಕ್ಷ ಡಾ.ಕೆ ಹರಿಪ್ರಸಾದ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನವೀನ್ ಪುತ್ರನ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.
Kshetra Samachara
14/11/2021 05:14 pm