ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ ಬೀಚ್ ವಿಂಚ್ ಪ್ಯಾರಾಸೈಲಿಂಗ್ ಬೋಟ್ ವರ್ಷಾಚರಣೆ ಸಂಭ್ರಮ

ಮಲ್ಪೆ: ಮಲ್ಪೆ ಬೀಚ್‌ನಲ್ಲಿ ಇಂದು ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್, ಮಲ್ಪೆ ಬೀಚ್ ವಿಂಚ್ ಪ್ಯಾರಾಸೈಲಿಂಗ್ ಬೋಟ್ ವರ್ಷಾಚರಣೆ ಸಂಭ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ, ಗಾಂಧಿ ಶತಾಬ್ದಿ ಆಂಗ್ಲ ಮಾಧ್ಯಮ ಶಾಲೆಗೆ ಪೀಠೋಪಕರಣ ವಿತರಣೆ ಹಾಗೂ ಸ್ಥಳೀಯ ಯುವ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಕೆ.ರಘುಪತಿ ಭಟ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನಿ. ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ, ನಗರಸಭಾ ಸದಸ್ಯರಾದ ಎಡ್ಲಿನ್ ಕರ್ಕಡ, ವಿಜಯ್ ಕೊಡವೂರು, ಸುಂದರ್ ಜೆ ಕಲ್ಮಾಡಿ, ಬಾಲಕೃಷ್ಣ ಶೆಟ್ಟಿ, ನಾಮ ನಿರ್ದೇಶಿತ ಸದಸ್ಯರಾದ ವಿಜಯ್ ಕುಂದರ್, ವಿನಯ ಕರ್ಕೇರ ನಿಕಟಪೂರ್ವ ಅಧ್ಯಕ್ಷರು ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

14/11/2021 07:33 pm

Cinque Terre

3.82 K

Cinque Terre

0

ಸಂಬಂಧಿತ ಸುದ್ದಿ