ಮಣಿಪಾಲ: ಸುಸ್ಥಿರ ಶಕ್ತಿಯ ಕೌಶಲ ವೃದ್ಧಿ ಸಾಧನೆಗಾಗಿ ದೊರೆಯುವ ಜಾಗತಿಕ ಮಟ್ಟದ ಆಶ್ಡೆನ್ ಪ್ರಶಸ್ತಿಗೆ ಈ ಬಾರಿ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ಆಯ್ಕೆಯಾಗಿದ್ದು, ನ. 4 ರಂದು ಲಂಡನ್ ನ ಗ್ಲಾಸ್ಕೋದಲ್ಲಿ ಈ ಆಶ್ಡನ್ ಪ್ರಶಸ್ತಿ ಪ್ರದಾನ ನಡೆಯಿತು.ಬಿವಿಟಿಯ ಮಾಸ್ಟರ್ ಟ್ರೈನರ್ ಆಗಿರುವ ಸುಧೀರ್ ಕುಲಕರ್ಣಿ ಪ್ರಶಸ್ತಿ ಸ್ವೀಕರಿಸಿದರು.
ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಭಾರತೀಯ ವಿಕಾಸ ಟ್ರಸ್ಟ್ ನ ತಂಡ , ಈ ಪ್ರಶಸ್ತಿಯ ಮೂಲಕ ಬಿವಿಟಿಗೆ ಜಗತ್ತಿನ ವಿವಿಧೆಡೆ ಸುಸ್ಥಿರ ಇಂಧನ ಕ್ಷೇತ್ರದಲ್ಲಿ ಕೆಲಸ ಮಾಡುವ ಸಂಸ್ಥೆಗಳ ಜೊತೆಗೆ ಮಾಹಿತಿ ವಿನಿಮಯ ಮಾಡುವ ಅವಕಾಶ, ಸಹಭಾಗಿತ್ವದ ಅವಕಾಶಗಳು ಲಭ್ಯವಾಗಲಿವೆ ಮತ್ತು ಬಿವಿಟಿಯ ಮುಂದಿನ ಯೋಜನೆಗಳ ಕುರಿತು ಸುಧೀರ್ ಕುಲಕರ್ಣಿ ಮಾಹಿತಿ ಹಂಚಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ಬಿವಿಟಿ ಮುಖ್ಯ ವ್ಯವಸ್ಥಾಪಕ ಮನೋಹರ್ ಕಟಗೇರಿ,ಲೆಕ್ಕಪತ್ರ ಮತ್ತು ಹಣಕಾಸು ವಿಭಾಗದ ವ್ಯವಸ್ಥಾಪಕರಾದ ಶ್ರದ್ಧಾ ಹೇರ್ಳೆ , ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರತಿಮಾ ಮತ್ತು ರಾಜಲಕ್ಷ್ಮಿ ಕೋಡಿಬೆಟ್ಟು ಉಪಸ್ಥಿತರಿದ್ದರು.
Kshetra Samachara
16/11/2021 03:39 pm