ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವೇದಮೂರ್ತಿ ನರಸಿಂಹ ಭಟ್ ನೇತೃತ್ವದಲ್ಲಿ ತುಳಸಿ ಪೂಜೆ ವಿಜೃಂಭಣೆಯಿಂದ ನಡೆಯಿತು.
ದೇವಸ್ಥಾನದಲ್ಲಿ ಉತ್ಥಾನ ದ್ವಾದಶಿಯಂದು ತುಳಸಿ ಪೂಜೆ ನಡೆದು ಮಧ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ ನಡೆಯಿತು.
ರಾತ್ರಿ ದೇವಸ್ಥಾನದಲ್ಲಿ ತುಳಸಿ ಪೂಜೆ ನಡೆದು ಕಾರ್ತಿಕ ಮಾಸದ ದೀಪೋತ್ಸವ ಹಾಗೂ ಶ್ರೀ ದೇವರ ಬಲಿ ಉತ್ಸವ ನಡೆಯಿತು.
ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ರಮೇಶ ಅಮೀನ್, ಬಿಜೆಪಿ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಗೋಪಾಲಕೃಷ್ಣ ಭಟ್, ಅಚ್ಯುತ ಭಟ್ ಪಾವಂಜೆ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ನಾಗೇಶ್ ಬಪ್ಪನಾಡು, ದೇವಸ್ಥಾನದ ಸಿಬ್ಬಂದಿ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ಮುಲ್ಕಿ ಪರಿಸರದ ಶಿಮಂತೂರು, ಸುರಗಿರಿ, ತೋಕೂರು,ಕಟೀಲು,ಪಾವಂಜೆ ದೇವಸ್ಥಾನಗಳಲ್ಲಿ ತುಳಸಿ ಪೂಜೆ ವಿಜೃಂಭಣೆಯಿಂದ ನಡೆಯಿತು
Kshetra Samachara
16/11/2021 10:41 pm