ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೆಗುಡ್ಡೆ: ಸಂಕಲನ 2021 ಕಾರ್ಯಕ್ರಮ ಉದ್ಘಾಟನೆ: ಸಾಧಕರಿಗೆ ಸಮ್ಮಾನ

ತೆಕ್ಕಟ್ಟೆ: ಕೊರ್ಗಿ ವಿಠಲ ಶೆಟ್ಟಿ ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ ಕುಂಭಾಸಿ ಇದರ ೩ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ನಡೆದ ಸಂಕಲನ- ೨೦೨೧ ಕಾರ್ಯಕ್ರಮವು ಕೊರ್ಗಿ ವಿಠಲ ಶೆಟ್ಟಿ ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ ಕುಂಭಾಸಿ ಇದರ ಪ್ರವರ್ತಕ ಕೊರ್ಗಿ ವಿಠಲ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ಸಭಾಗೃಹದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಜಾನ್ ಡಿಸೋಜಾ, ಪ್ರಗತಿ ಪರ ಕೃಷಿಕ ಹೆರಿಯಣ್ಣ ಶೆಟ್ಟಿ ಯಡಾಡಿ ಮತ್ಯಾಡಿ ಹಾಗೂ ಮಿಲಾಗ್ರಿಸ್ ಕಾಲೇಜ್ ಕಲ್ಯಾಣಪುರ ಇಲ್ಲಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಅವರನ್ನು ಗುರುತಿಸಿ ಸಮ್ಮಾನಿಸಲಾಯಿತು ಹಾಗೂ ಅಶಕ್ತರಿಗೆ ಅರ್ಥಿಕ ನೆರವು ನೀಡಲಾಯಿತು.

ಕಾರ್ಯಕ್ರಮದಲ್ಲಿ ಭವಾನಿ ವಿ.ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ಕೆ. ಕೃಷ್ಣಪ್ರಸಾದ್ ಅಡ್ಯಂತಾಯ , ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ಸಭಾಗೃಹ ಇದರ ಮಾಲಕ ಕೆ.ರವಿರಾಜ್ ಉಪಾ‘ಯ, ಶ್ರೀ ಸಿದ್ಧಿ ವಿನಾಯಕ ಕ್ಯಾಶ್ಯೂ ಕೆದೂರು ಇದರ ಮಾಲಕ ಉದ್ಯಮಿ ಅರುಣ್ ಕುಮಾರ್ ಶೆಟ್ಟಿ , ಚರ್ಮರೋಗ ತಜ್ಞ ಡಾ. ಅರುಣ್ ಶೆಟ್ಟಿ ಕೆ., ಹಾಗೂ ಟ್ರಸ್ಟ್‌ನ ಸದಸ್ಯರು ಉಪಸ್ಥಿತರಿದ್ದರು. ಕೆ.ರವಿರಾಜ್ ಉಪಾ‘ಯ ಸ್ವಾಗತಿಸಿ, ಶ್ರೀ ಹಟ್ಟಿಯಂಗಡಿ ಮೇಳದ ವ್ಯವಸ್ಥಾಪಕ ಉಪಸ್ಥಿತರಿದ್ದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಶ್ರೀ ಹಟ್ಟಿಯಂಗಡಿ ಮೇಳದವರಿಂದ ಯಕ್ಷ ಗಾನ- ನಾಟ್ಯ- ಹಾಸ್ಯ ವೈಭವ ಪ್ರದರ್ಶನಗೊಂಡಿತು.

Edited By : PublicNext Desk
Kshetra Samachara

Kshetra Samachara

17/11/2021 12:34 pm

Cinque Terre

1.84 K

Cinque Terre

0

ಸಂಬಂಧಿತ ಸುದ್ದಿ