ಮಂಗಳೂರು: ನಗರದ ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿ ಅನನ್ಯಾ ಸಿಂಗ್ 'ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್' ಕಿರೀಟವನ್ನು ಮುಡಿಗೇರಿಸಿದ್ದಾರೆ.
ನವದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್ ಆಯೋಜಿಸಿದ್ದ ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ಅನನ್ಯಾ ಸಿಂಗ್ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಈ ಗೌರವ ಲಭಿಸಿದೆ. ಅನನ್ಯಾ ಸಿಂಗ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿಯಾಗಿದ್ದಾರೆ.
ಈ ಸ್ಪರ್ಧೆಯಲ್ಲಿ ದೇಶದ ಅನೇಕ ರಾಜ್ಯಗಳ ಸ್ಪರ್ಧಿಗಳು ಭಾಗವಹಿಸಿದ್ದರು. ಸ್ಪರ್ಧಿಯ ನಡೆ, ಪರಿಚಯ, ಪ್ರಶ್ನೋತ್ತರಗಳ ಹಿನ್ನೆಲೆಯಲ್ಲಿ ಅನನ್ಯಾ ಸಿಂಗ್ ಮಿಸ್ ಇಂಡಿಯಾ ಗೌರವಕ್ಕೆ ಪಾತ್ರರಾಗಿದ್ದಾರೆ.
Kshetra Samachara
18/11/2021 11:00 pm