ಮುಲ್ಕಿ: ಮುಲ್ಕಿ ವಿಜಯಾ ಕಾಲೇಜು ಮುಖ್ಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎ ಫೌಂಡೇಶನ್ ಕೋರ್ಸ್ ನ ಉದ್ಘಾಟನಾ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಸಾಯಿ ವಿಶಿಷ್ಟ ಅಕಾಡೆಮಿ ಯ ಮ್ಯಾನೇಜಿಂಗ್ ಡೈರೆಕ್ಟರ್ ಸಿಎ ಪ್ರಧಾನ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಸಿಎ ಕೋರ್ಸ್ ನ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾಲೇಜಿನ ಟ್ರಸ್ಟಿ ಶಿವರಾಮ ಕಾಮತ್ ಮಾತನಾಡಿ ವಿದ್ಯಾರ್ಥಿಗಳು ಸಿಎ ಮಾಡಿದಲ್ಲಿ ತಮ್ಮನ್ನು ತಾವು ಆರ್ಥಿಕವಾಗಿ ಸದೃಢ ಗೊಳಿಸಬಹುದು ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಮಣಿ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಪಿಯು ಪ್ರಾಂಶುಪಾಲರಾದ ಪಮೀದಾ ಬೇಗಂ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಸಂಪತ್ ಕುಮಾರ್ ವಂದಿಸಿದರು, ವಾಣಿಜ್ಯಶಾಸ್ತ್ರ ವಿಭಾಗದ ಕು. ಅರುಣಾ ಕಾರ್ಯಕ್ರಮ ನಿರೂಪಿಸಿದರು.
Kshetra Samachara
20/11/2021 02:21 pm