ಉಡುಪಿ: ಅಪ್ಪು ಸ್ಮರಣಾರ್ಥ ಅಭಿಮಾನಿಗಳಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.ಇದಕ್ಕೆ ಸ್ಪಂದಿಸಿದ ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡಿದರು. ರಕ್ತದಾನ ಮಾಡಿದವರಿಗೆ ಅಪ್ಪು ಭಾವಚಿತ್ರ ಇರುವ ಸರ್ಟಿಫಿಕೇಟ್ ನೀಡಿ ರಕ್ತದಾನ ಮಾಡುವುದಕ್ಕೆ ಪ್ರೇರೇಪಣೆ ಮಾಡಲಾಯಿತು.
ರಕ್ತದಾನ ಮಾಡುವುದರಿಂದ ಇನ್ನೊಬ್ಬರಿಗೆ ಸಹಾಯ ಆಗುತ್ತದೆ, ರಕ್ತದಾನ ಮಾಡುವುದರಿಂದ ಆರೋಗ್ಯ ಸಹ ಉತ್ತಮವಾಗಿರುತ್ತದೆ. ಮುಂದಿನ ದಿನಗಳಲ್ಲಿ ಅಪ್ಪು ಸ್ಮರಣಾರ್ಥ ಅಪ್ಪು ಮಾಡಿದ ಸಾಮಾಜಿಕ ಕೆಲಸಗಳನ್ನೇ ಜಿಲ್ಲೆಯಲ್ಲಿ ಬರುವ ದಿನಗಳಲ್ಲಿ ರಕ್ತದಾನ, ನೇತ್ರದಾನ ಹಾಗೂ ದೇಹದಾನದ ಬಗ್ಗೆ ಅರಿವು ಹಾಗೂ ಶಿಬಿರಗಳನ್ನು ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಸಹಕಾರದಿಂದ ಮಾಡಲಾಗುವುದು ಎಂದು ಅಪ್ಪು ಅಭಿಮಾನಿಗಳ ಸಂಘದ ಮುಖ್ಯಸ್ಥರು ಹೇಳಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷರುಗಳಾದ ಸರಕಾರಿ ನೌಕರರ ಸಂಘ, ಗುತ್ತಿಗೆ ನೌಕರರ ಸಂಘ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಲಯನ್ಸ್ ಕ್ಲಬ್ ಉಡುಪಿ ಚೇತನ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸಿದ್ದರು.
Kshetra Samachara
20/11/2021 04:58 pm