ಮುಲ್ಕಿ: ಮುಲ್ಕಿ ವಿಜಯ ಕಾಲೇಜಿನ ವಿದ್ಯಾರ್ಥಿ ಸಂಘ ದ ಉದ್ಘಾಟನಾ ಸಮಾರಂಭ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮಂಗಳೂರು ವಿಭಾಗದ ಡಿ.ವೈ.ಎಸ್ಪಿ ದಿನೇಶ್ ಕುಮಾರ್ ಉದ್ಘಾಟಿಸಿ ಮಾತಾನಾಡಿ ಪ್ರತಿಯೊಬ್ಬ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ನಾಯಕತ್ವದ ಗುಣಗಳ ಬಗ್ಗೆ ಅರಿವುವಿರಬೇಕು. ವಿದ್ಯಾರ್ಥಿ ಸಂಘವು ಕಾಲೇಜು ಜೀವನದಲ್ಲಿ ಅವಿಭಾಜ್ಯ ಅಂಗವಾಗಿ ಕಾರ‍್ಯನಿರ್ವಹಿಸುತ್ತದೆ. ವಿದ್ಯಾರ್ಥಿಗಳು ಸಮಾಜ ಸೇವೆಯ ಕಡೆಗೆ ಹೆಚ್ಚಿನ ಒಲವನ್ನು ತೋರಬೇಕು. ಯಾವುದೇ ದುಶ್ವಟಗಳಿಗೆ ಬಲಿಯಾಗದೆ, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಸಂಸ್ಥೆಯ ಅಧ್ಯಕ್ಷ ಸುಹಾಸ್ ಹೆಗ್ಡೆ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಶ್ರೀಮಣಿ ಶೆಟ್ಟಿ, ಪಿಯು ಪ್ರಾಂಶುಪಾಲರಾದ ಪಮೀದ ಬೇಗಂ, ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಸಂಪತ್ ಕುಮಾರ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು, ಕು. ವಂದನಾ ಕಾರ್ಯಕ್ರಮ ನಿರೂಪಿಸಿದರು.
Kshetra Samachara
27/11/2021 11:01 am