ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಸಮಾಜಕ್ಕೆ ಕೊಡುಗೆ ನೀಡಿದವರಿಗೆ ಗೌರವಾರ್ಪಣೆ ಶ್ಲಾಘನೀಯ: ಪೇಜಾವರ ಶ್ರೀ

ಕಟೀಲು: ಬಡವರ ಅನ್ನದಾತರಾಗಿ, ಕೊಡುಗೈ ದಾನಿಯಾಗಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದವರನ್ನು ಗೌರವಿಸುವ ಕಾರ್ಯ ಶ್ಲಾಘನೀಯ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸರಸ್ವತೀ ಸದನದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ಸುರೇಶ್ ರಾವ್ ಅಭಿಮಾನಿಗಳ ವತಿಯಿಂದ ನಡೆದ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ನಡೆದ ಅಭಿನಂದನೆ ಸಮಾರಂಭದಲ್ಲಿ ಮಾತನಾಡಿದರು.

ಕರ್ಣಾಟಕ ಬ್ಯಾಂಕ್ ನ ಸಿಇಒ ಮಹಾಬಲೇಶ್ವರ ಭಟ್ ಮಾತನಾಡಿದರು.ಈ ಸಂದರ್ಭ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರೇಶ್ ರಾವ್ ಕಟೀಲು ಹಾಗೂ ರೋಹಿತ್ ಕುಮಾರ್ ಕಟೀಲ್ ಅವರಿಗೆ ಗೌರವಾರ್ಪಣೆ ನಡೆಯಿತು.

ಶಾಸಕ ಉಮಾನಾಥ ಕೋಟ್ಯಾನ್ ಶುಭ ಹಾರೈಸಿದರು. ಕಟೀಲು ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ, ಆಡಳಿತ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ವಿಶ್ವ ಹಿಂದೂ ಪರಿಷತ್ ರಾಜ್ಯಾಧ್ಯಕ್ಷ ಎಂ.ಬಿ.ಪುರಾಣಿಕ್, ಹರಿಕೃಷ್ಣ ಪುನರೂರು, ಡಾ. ಆನಂದ್ ವೇಣುಗೋಪಾಲ್, ಪ್ರದೀಪ್ ಕುಮಾರ್ ಕುಮಾರ್ ಕಲ್ಕೂರ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

ಹರಿನಾರಾಯಣ ಆಸ್ರಣ್ಣ ಅಭಿನಂದನೆ ಭಾಷಣ ಮಾಡಿದರು. ಅನಂತಪದ್ಮನಾಭ ಆಸ್ರಣ್ಣ ಸ್ವಾಗತಿಸಿದರು. ನಿತೇಶ್ ಶೆಟ್ಟಿ ನಿರೂಪಿಸಿದರು.

Edited By : Manjunath H D
Kshetra Samachara

Kshetra Samachara

28/11/2021 10:20 am

Cinque Terre

12.62 K

Cinque Terre

0

ಸಂಬಂಧಿತ ಸುದ್ದಿ