ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಿದ್ಧತೆಗಳು ಕುರಿತು ಭಕ್ತಾದಿಗಳ ಸಭೆ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿದಾಸ್ ಭಟ್ ಮಾತನಾಡಿ, ಮುಂದಿನ ದಿನಗಳಲ್ಲಿ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಜೀರ್ಣೋದ್ಧಾರ ಕಾರ್ಯಕ್ರಮಗಳು ನಡೆಯಲಿದ್ದು ಭಕ್ತರ ಸಹಕಾರ ಅಗತ್ಯ ಎಂದರು.
ಮುಂದಿನ ಜನವರಿ 14ರಂದು ದೇವಸ್ಥಾನದ ಗರ್ಭಗುಡಿಯ ಜೀರ್ಣೋದ್ದಾರಕ್ಕೆ ಚಾಲನೆ ನೀಡಲಾಗುವುದು. ಜಾತ್ರಾಮಹೋತ್ಸವದ ದಿನಗಳಂದು ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುವುದರ ಜೊತೆಗೆ ಅನ್ನಸಂತರ್ಪಣೆ ಮತ್ತಿತರ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರ ಪಾಲ್ಗೊಳ್ಳುವಿಕೆ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದರು.
ಸುಬ್ರಹ್ಮಣ್ಯ ದೇವರ ರಥೋತ್ಸವ ನಡೆಯುವ ಪವಿತ್ರ ಸ್ಥಳ (ಸುಮಾರು 29.5 ಸೆಂಟ್ಸ್)ವನ್ನು ಉಡುಪಿಯ ದಾನಿಗಳಾದ ಶ್ಯಾಮಲ ವಾಸುದೇವ ರಾವ್ ದಾನ ರೂಪದಲ್ಲಿ ದೇವಸ್ಥಾನಕ್ಕೆ ಹಸ್ತಾಂತರಿಸಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯುವ ಜಾತ್ರಾಮಹೋತ್ಸವವನ್ನು ಕೊರೊನಾ ನಿಯಮಗಳನ್ನು ಪಾಲಿಸಿಕೊಂಡು ಭಕ್ತರು ನಡೆಸಿಕೊಡಬೇಕು ಎಂದು ವಿನಂತಿಸಿದರು.
ಈ ಸಂದರ್ಭ ದೇವಳದ ಅರ್ಚಕರಾದ ಮಧುಸೂದನ ಆಚಾರ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಟಿ.ಪುರುಷೋತ್ತಮ ರಾವ್, ಎಲ್.ಕೆ. ಸಾಲ್ಯಾನ್, ಯೋಗೀಶ್ ಕೋಟ್ಯಾನ್, ವಿಜಯಕುಮಾರ್ ರೈ, ಶಾರದಾ ಬಂಗೇರ, ವಿಫುಲ ಡಿ ಶೆಟ್ಟಿಗಾರ್, ವಿಶ್ವನಾಥ, ಜೀರ್ಣೋದ್ಧಾರ ಸಮಿತಿಯ ಸದಸ್ಯರಾದ ಮೋಹನ್ದಾಸ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
28/11/2021 12:11 pm